ಮೈಸೂರು: ನಂಜನಗೂಡು ತಾಲೂಕು ಅಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧ 4 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ವೈದ್ಯರು ಸಾರ್ವಜನಿಕರು ಹಿತದೃಷ್ಟಿಯಿಂದ ಇಂದು ಮುಷ್ಕರ ಹಿಂತೆಗೆದುಕೊಳ್ಳಲಾಗಿದೆ.
ಮೈಸೂರು ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ್ ಮಾಧ್ಯಮಗಳೊಂದಿಗೆ ಮಾತನಾಡಿ, ತನಿಖೆ ನಂತರ ಅಮಾನತು ಪ್ರಕ್ರಿಯೆ ಆಗಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳೇ ನೋಡಲ್ ಅಧಿಕಾರಿಗಳಾಗಿ ಕೆಲಸ ಮಾಡಬೇಕು. ಕೆಎಎಸ್, ಐಎಎಸ್ ಅಧಿಕಾರಿಗಳನ್ನು ಕೊರೊನಾ ನೋಡಲ್ ಅಧಿಕಾರಿಗಳಾಗಿ ಮಾಡಬಾರದು ಎಂದು ಒತ್ತಾಯಿಸಿದರು.
ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ಪ್ರಕರಣ ವರದಿ ಬರುವವರೆಗೂ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.