ETV Bharat / state

ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ.ಹೆಚ್‌.ಸಿ.ಮಹದೇವಪ್ಪ - launched cereal celebration

ನಂಜರಾಜ ಬಹದ್ಧೂರ್ ಛತ್ರದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಸಂಭ್ರಮಕ್ಕೆ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಚಾಲನೆ ನೀಡಿದರು.

ಹೆಚ್ ಸಿ ಮಹದೇವಪ್ಪ
ಹೆಚ್ ಸಿ ಮಹದೇವಪ್ಪ
author img

By ETV Bharat Karnataka Team

Published : Dec 20, 2023, 8:09 AM IST

ಮೈಸೂರು:‌ ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿ ಜೊತೆಗೆ ರೈತರೂ ಸಹ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು.

Dr. HC Mahadevappa launched cereal celebration
ಸಿರಿಧಾನ್ಯ ಸಂಭ್ರಮದಲ್ಲಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದಿಂದ ನಗರದ ನಂಜರಾಜ ಬಹದ್ಧೂರ್ ಛತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಮೂರು ದಿನಗಳ 'ಸಿರಿಧಾನ್ಯ ಸಂಭ್ರಮಕ್ಕೆ' ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರು ಹೆಚ್ಚಾಗಿ ಸಾವಯವ ಕೃಷಿಯಲ್ಲಿ ತೊಡಸಿಕೊಳ್ಳುವಂತಾಗಲಿ ಎಂದು ಹೇಳಿದರು.

ಡಾ.ಹೆಚ್‌.ಸಿ.ಮಹದೇವಪ್ಪ

ಭಾರತವು ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಜನರ ಮೂಲ ಕಸುಬು ಕೃಷಿಯಾಗಿದೆ. ಅಗತ್ಯಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಆಹಾರ ಉತ್ಪಾದಿಸುವ ಜೊತೆಗೆ ಕೃಷಿಯು ರೈತರ ಕೈಯಲ್ಲೇ ಇರಬೇಕು. ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಆದರೆ, ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ರೈತರು ಸಾವಯವ ಕೃಷಿಯಲ್ಲಿ ತೊಡಗಲು ರಾಜ್ಯ ಸರ್ಕಾರ ಹೆಕ್ಟೇರ್‌ಗೆ 10 ಸಾವಿರ ರೂ. ನೀಡುವ ಮೂಲಕ ಸಿರಿಧಾನ್ಯ ಉತ್ಪಾದನೆ ಉತ್ತೇಜಿಸುತ್ತಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೃಷಿ ಸಚಿವರು ನಮ್ಮೆಲ್ಲರನ್ನೂ ಸೇರಿಸಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಆಚರಣೆ ಮಾಡಿದ್ದರು ಎಂದು ತಿಳಿಸಿದರು‌.

ಕೊಲಂಬಸ್ ಭಾರತಕ್ಕೆ ಬರುವ ಮುನ್ನವೇ ಬಣ್ಣದ ಜೋಳ ಬೆಳೆಯಲಾಗುತ್ತಿತ್ತು ಎಂಬ ಮಾಹಿತಿ ಇದೆ. ರಾಸಾಯನಿಕ ಗೊಬ್ಬರ ಬಳಸದೇ ಮಣ್ಣಿನ ಫಲವತ್ತತೆ ಕಾಪಾಡುವ ಸಾವಯವ ಕೃಷಿಗೆ ನಾವೆಲ್ಲರೂ ಬೆಂಬಲ ಕೊಡಬೇಕು ಎಂದರು.

ನಟಿ, ರಂಗಕರ್ಮಿ ಅಕ್ಷತಾ ಪಾಂಡವಪುರ ಅವರು ಪೌಷ್ಟಿಕ ಪಾಕ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಹಾವೇರಿಯ ಸಿರಿಧಾನ್ಯ ಸಂರಕ್ಷಕ ವೀರಭದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ದೇವಧಾನ್ಯ ರೈತ ಉತ್ಪಾದಕರ ಕಂಪನಿ ನಿರ್ದೇಶಕಿ ಸಾವಿತ್ರಿ ಕೊಡ್ಲಿ, ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಜಿ.ಕೃಷ್ಣಪ್ರಸಾದ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಪರಿಣಿತರನ್ನು ನೇಮಕ ಮಾಡುವಂತೆ ರೈತ ಸಂಘ ಒತ್ತಾಯ: ಆಯೋಗಕ್ಕೆ ಮತ್ತೊಂದೆಡೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯದ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವ ವೇಳೆ ರಾಜ್ಯ ಸರ್ಕಾರ ಈ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವವರನ್ನ ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಈ ಆಯೋಗಕ್ಕೆ ಶಾಸಕರು ಅಥವಾ ರಾಜಕೀಯ ಕಾರಣಕ್ಕಾಗಿ ರಾಜಕೀಯ ಹಿನ್ನೆಲೆ ಹೊಂದಿರುವವರನ್ನು ನೇಮಕ ಮಾಡಿಕೊಂಡರೆ ಏನೂ ಪ್ರಯೋಜನವಾಗುವುದಿಲ್ಲ. ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯವರಿಗೆ ಪತ್ರ ಬರೆಯಲಾಗಿದ್ದು, ಕೃಷಿ ವಿಶ್ವ ವಿದ್ಯಾನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಪರಿಣಿತರನ್ನು ನೇಮಕ ಮಾಡಿಕೊಂಡರೆ ಅನುಕೂಲವಾಗುತ್ತದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.