ETV Bharat / state

ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಸಿದ್ಧ: ಸಚಿವ ಡಾ. ಸುಧಾಕರ್

ನಂಜನಗೂಡಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ವೈದ್ಯಾಧಿಕಾರಿ ಕುಟುಂಬ ಯಾವ ರೀತಿಯಲ್ಲಿ ಘಟನೆಯ ಕುರಿತು ತನಿಖೆ ನಡೆಸಲು ಬಯಸುತ್ತದೆಯೋ, ಅದೇ ಮಾದರಿಯ ತನಿಖೆ ನಡೆಸಲು ಸರ್ಕಾರ ಸಿದ್ಧ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್
author img

By

Published : Aug 21, 2020, 1:42 PM IST

Updated : Aug 21, 2020, 3:01 PM IST

ಬೆಂಗಳೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಸಿದ್ದವಿದೆ. ಅವರ ಕುಟುಂಬ ಬಯಸುವ ತನಿಖೆಗೆ ನಮ್ಮ ಸಮ್ಮತಿ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಮಲ್ಲೇಶ್ವರಂಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭೇಟಿ ನೀಡಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ, ಕೋವಿಡ್ ಸೇರಿದಂತೆ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ತಿಂಗಳ ನಂತರ ಬಿ.ಎಲ್ ಸಂತೋಷ್ ರಾಜ್ಯಕ್ಕೆ ಮರಳಿದ್ದಾರೆ. ಹಾಗಾಗಿ ಅವರ ಭೇಟಿಗೆ ಬಂದಿದ್ದೆ. ಈ ವೇಳೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಮಾಹಿತಿ ಕೇಳಿದರು. ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅವರಿಗೆ ವರದಿ ಕೊಟ್ಟಿದ್ದೇವೆ. ಅವರು ಕೂಡ ಈ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು. ನಿತ್ಯ 65,000 ಪರೀಕ್ಷೆಯನ್ನು ನಡೆಸುತ್ತಿದ್ದು, ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವಂತೆ ಹೇಳಿದ್ದಾರೆ. ನಾವು ಕೂಡ ಈ ನಿಟ್ಟಿನಲ್ಲಿ ಸಾಗುತ್ತಿರುವ ಮಾಹಿತಿ ನೀಡಿದ್ದೇನೆ ಎಂದರು.

ಉನ್ನತ ಮಟ್ಟದ ತನಿಖೆಗೆ ಸರ್ಕಾರ ಸಿದ್ಧ ಎಂದ ಸಚಿವರು

ತಾಲೂಕು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ದಣಿದಿರುವ ಕೊರೊನಾ ಯೋಧರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿ ಎಂದಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.

ಡಿಜೆ ಹಳ್ಳಿ ಗಲಭೆ ಕುರಿತು ನನ್ನ ಜೊತೆ ಅವರು ಏನು ಚರ್ಚೆ ಮಾಡಿಲ್ಲ. ಆದರೆ ಈ ರೀತಿಯ ಬೆಳವಣಿಗೆಗೆ ನೋವು ವ್ಯಕ್ತಪಡಿಸಿದ್ದಾರೆ. ಶಾಸಕರ ಮೇಲೆ ದಾಳಿ ಮಾಡುವುದು ಸರಿಯಲ್ಲ. ಇದನ್ನು ನೋಡಿಕೊಂಡು ಸುಮ್ಮನೆ ಇರುವುದಕ್ಕೆ ಆಗುತ್ತಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಅವರಿಗೆ ಮಾಹಿತಿ ಕೊಡಲಿದ್ದಾರೆ. ಅಂತಿಮವಾಗಿ ಸರ್ಕಾರದ ನಿಲುವನ್ನು ಅವರಿಗೆ ತಿಳಿಸುತ್ತಾರೆ ಎಂದರು.

ವೈದ್ಯಕೀಯ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ನಮ್ಮ ತಕರಾರು ಇಲ್ಲ. ಈಗಾಗಲೇ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಅವರ ಪತ್ನಿಗೆ ಸಬ್ ರಿಜಿಸ್ಟ್ರಾರ್​ ಹುದ್ದೆ ನೀಡಲು ತೀರ್ಮಾನ ಮಾಡಲಾಗಿದೆ. ತನಿಖೆಯ ಬಗ್ಗೆ ಸಮಯ ನಿಗದಿ ಮಾಡಲು ಸಾಧ್ಯವಿಲ್ಲ. ಆದಷ್ಟು ಬೇಗ ವರದಿ ಬರಲಿ. ಅವರ ಕುಟುಂಬ ಸದಸ್ಯರು ಯಾವ ರೀತಿ ಹೇಳುತ್ತಾರೋ ಆ ರೀತಿಯ ತನಿಖೆಗೆ ಸರ್ಕಾರ ಬದ್ಧವಿದೆ ಎಂದರು.

Last Updated : Aug 21, 2020, 3:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.