ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಡಾ. ವಿದ್ಯಾಶಂಕರ್ ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ನಿರ್ಗಮಿತ ಕುಲಪತಿ ಪ್ರೊ. ಶಿವಲಿಂಗಯ್ಯ ಅವರು ಇಂದು ಅಧಿಕಾರ ಹಸ್ತಾಂತರಿಸಿದ್ದಾರೆ.
ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಕುಲಪತಿ ಡಾ.ವಿದ್ಯಾಶಂಕರ್, ಕೆಎಸ್ಒಯುಗೆ ಕುಲಪತಿಯಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷ ತಂದಿದೆ. ಮುಂದಿನ ಮೂರು ವರ್ಷಗಳಲ್ಲಿ ಏನೆಲ್ಲಾ ಒಳ್ಳೆಯ ಕೆಲಸ ಮಾಡಬಹುದೋ ಅವೆಲ್ಲವನ್ನೂ ಮಾಡುತ್ತೇನೆಂದು ತಿಳಿಸಿದ್ದಾರೆ.