ETV Bharat / state

ಕ್ವಾರಂಟೈನ್​ ಉಲ್ಲಂಘನೆ: ಮೈಸೂರಿನಲ್ಲಿ ಡ್ರೋನ್​​​ ಪ್ರತಾಪ್​​ ಬಂಧನ!

author img

By

Published : Jul 20, 2020, 5:35 PM IST

ಕ್ವಾರಂಟೈನ್​ ವೇಳೆ ಮೊಬೈಲ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದ ಡ್ರೋನ್​​ ಪ್ರತಾಪ್​​ನನ್ನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Drone prathap arrested in mysore
Drone prathap arrested in mysore

ಮೈಸೂರು: ಹೋಂ ಕ್ವಾರಂಟೈನ್ ನಿಯಮ​ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಇದೀಗ ಡ್ರೋನ್ ಪ್ರತಾಪ್​ನನ್ನ ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದು, ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೋಂ ಕ್ವಾರಂಟೈನ್​ ನಿಯಮ‌ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ತಲೆಮರೆಸಿಕೊಂಡಿದ್ದ ಪ್ರತಾಪನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಸುದ್ದಿ ವಾಹಿನಿಗಳ ಸಂದರ್ಶನದಲ್ಲಿ ಭಾಗವಹಿಸುವ ಸಲುವಾಗಿ ಡ್ರೋನ್ ಪ್ರತಾಪ್ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದ ಎನ್ನಲಾಗಿದೆ.

ಕ್ವಾರಂಟೈನ್ ನಿಯಮ ಉಲ್ಲಂಘನೆ.. ಡ್ರೋನ್ ಪ್ರತಾಪ್ ವಿರುದ್ಧ ಎಫ್ಐಆರ್ ದಾಖಲು..
ಹೈದರಾಬಾದ್​ನಿಂದ ಆಗಮಿಸಿದ್ದ ಡ್ರೋನ್ ಪ್ರತಾಪ್​​ನನ್ನು ಬೆಂಗಳೂರಿನ ತಲಘಟ್ಟಪುರದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಕ್ವಾರಂಟೈನ್​ನಲ್ಲಿರಲು ಬಿಬಿಎಂಪಿ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆತನ ಕೈ ಮೇಲೆ ಕ್ವಾರಂಟೈನ್ ಸೀಲ್ ಹಾಕಲಾಗಿತ್ತು. ಆದರೂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಆತ ಎಲ್ಲೆಡೆ ಓಡಾಡಿದ್ದ. ಜತೆಗೆ ತಲೆಮರೆಸಿಕೊಂಡಿದ್ದರಿಂದ ಆತನ ವಿರುದ್ಧ ದೂರು ದಾಖಲಾಗಿತ್ತು. ಡ್ರೋನ್ ಪ್ರತಾಪ್ ಬಂಧನಕ್ಕೆ ಮೂರು ಪೊಲೀಸ್​​ ತಂಡಗಳನ್ನು ರಚಿಸಲಾಗಿತ್ತು. ಡ್ರೋನ್ ಪ್ರತಾಪ್ ಮೈಸೂರಿನಲ್ಲಿದ್ದಾನೆ ಎಂಬ ಮಾಹಿತಿ ಪಡೆದ ತಲಘಟ್ಟಪುರ ಪೋಲಿಸರ ತಂಡ, ಆತನನ್ನು ಬಂಧಿಸಿ ಇಂದು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.