ಮೈಸೂರು: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ , ನಂಜನಗೂಡಿನಲ್ಲಿ ಕಟ್ಟೆಚ್ಚರ ವಹಿಸಿದ್ದು, ಎಲ್ಲಾ ವಾರ್ಡ್ ಗಳಿಗೂ ಔಷಧ ಸಿಂಪಡಣೆ ಮಾಡಲಾಗಿದೆ.
ನಂಜನಗೂಡು ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿ ಇರುವ ಹಿನ್ನೆಲೆಯಲ್ಲಿ , ನಗರಸಭಾ ಸಿಬ್ಬಂದಿ ಪಟ್ಟಣದ ಎಲ್ಲ ವಾರ್ಡ್ ಗಳಿಗೂ ಅಗ್ನಿಶಾಮಕ ಬಾಹನ ಬಳಕೆ ಮಾಡಿಕೊಂಡು ಪ್ರಮುಖ ರಸ್ತೆಗಳಲ್ಲಿ ಔಷಧ ಸಿಂಪಡಿಸಿದ್ದಾರೆ.
ನಂಜನಗೂಡಿನಲ್ಲಿ ಕಾಣಿಸಿಕೊಂಡ ಕೊರೊನಾ ಪಾಸಿಟಿವ್ ಮೈಸೂರಿಗರನ್ನು ಬೆಚ್ಚಿಬೀಳಿಸಿದೆ. ಈ ಹಿನ್ನೆಲೆ ಮೈಸೂರಿನಲ್ಲಿ ಅತ್ಯಂತ ಕಠಿಣಕ್ರಮಗಳನ್ನು ಕೈಗೊಳ್ಳಲಾಗಿದೆ.