ಮೈಸೂರು: ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕ್ಯೂಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದೆ. ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು ಇ ಹುಂಡಿಯನ್ನು ಉದ್ಘಾಟನೆ ಮಾಡಿದರು.
ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಚಾಮುಂಡೇಶ್ವರಿ ದೇವಸ್ಥಾನದ ಇ ಹುಂಡಿ ಬಳಕೆ ಮಾಡಿಕೊಳ್ಳಬಹುದು. ಇದರ ಭದ್ರತಾ ಕ್ರಮಗಳ ಬಗ್ಗೆ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ ಎಂದರು. ಅಲ್ಲದೆ ಇದರ ದುರುಪಯೋಗದ ಬಗ್ಗೆ ತಿಳಿದು ಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿಯೂ ಸಹ ಅಧಿಕಾರಿಗಳು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಿ.ಜಿ. ಕೃಷ್ಣ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಬಹುತೇಕ ಎ - ಗ್ರೇಡ್ ದೇವಸ್ಥಾನಗಳಲ್ಲಿ ಕ್ಯೂಆರ್ ಕೋಡ್ ಸಹಿತ ಇ - ಹುಂಡಿ ಸೌಲಭ್ಯವಿದ್ದು, ಅದನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ಆಳವಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ. ಅದರಂತೆ ಇಂದು ಇ- ಹುಂಡಿ ಬಿಡುಗಡೆಗೊಳಿಸಲಾಗಿದೆ. ಶ್ರೀ ದೇವಿಯ ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಸೆ.10 ರಿಂದ ವಿಧಾನಮಂಡಲ ಅಧಿವೇಶನ, ಹುತಾತ್ಮ ಯೋಧರ ಕುಟುಂಬಕ್ಕೆ ಅನುಕಂಪದ ನೌಕರಿಗೆ ಒಪ್ಪಿಗೆ