ಮೈಸೂರು: ಮುಖ್ಯಮಂತ್ರಿ ಬದಲಾವಣೆ ಎಂಬ ವಿಷಯಕ್ಕೆ ಯಾವುದೇ ಅರ್ಥ ಇಲ್ಲ. 100ಕ್ಕೆ ನೂರರಷ್ಟು ಈ ಅವಧಿ ಪೂರ್ತಿ ಯಡಿಯೂರಪ್ಪನವರೇ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಗ್ರಂಥಾಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿ ಬದಲಾವಣೆ ಇಲ್ಲ. ಆಗಾಗ ಸಿಎಂ ಬದಲಾವಣೆ ಎಂಬ ಪದ ಬಂದು ಹೋಗುತ್ತಿದೆ. ಆದರೆ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಅವಧಿ ಪೂರ್ತಿ ಯಡಿಯೂರಪ್ಪನವರೇ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದಿದ್ದಾರೆ.
ಸಂಪುಟ ವಿಸ್ತರಣೆ ಸಂಪೂರ್ಣ ಮುಖ್ಯಮಂತ್ರಿಗಳ ಪರಮಾಧಿಕಾರ. ಅದು ಅವರು ನಿರ್ಧಾರ ಮಾಡಿದ ಹಾಗೆ ಆಗುತ್ತದೆ. ಆ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ.