ಮೈಸೂರು: ದಸರಾ ಮಹೋತ್ಸವಕ್ಕೆ ನೀತಿ ಸಂಹಿತೆ ಸಡಿಲಿಕೆ ಮಾಡುವ ಮೂಲಕ ಜನಪ್ರತಿನಿಧಿಗಳಿಗೆ ರಾಜ್ಯ ಚುನಾವಣೆ ಆಯೋಗ ನಿರಾಳತೆಯನ್ನ ಉಂಟು ಮಾಡಿದೆ.
ಹುಣಸೂರು ಸೇರಿದಂತೆ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ನೀತಿ ಸಂಹಿತೆ ಅಡ್ಡಿಯಾಗಿ ದಸರಾ ಮಹೋತ್ಸವಕ್ಕೆ ಭಾಗವಹಿಸಲು ಕಷ್ಟವಾಗಬಹುದೆಂದು ಜನಪ್ರತಿನಿಧಿಗಳು ಭಾವಿಸಿದ್ದರು. ಈ ಸಂಬಂಧ ಶನಿವಾರ ಸಂಜೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ದಿಢೀರ್ ಪ್ರತಿಕಾಗೋಷ್ಠಿ ನಡೆಸಿ ರಾಜ್ಯ ಚುನಾವಣೆ ಆಯೋಗಕ್ಕೆ ಅನುಮತಿ ಕೋರಿ ಪತ್ರ ಬರೆಯಲಾಗುವುದು ಎಂದು ತಿಳಿದ್ದರು.
ಸದ್ಯ ಜಿಲ್ಲಾಧಿಕಾರಿ ಪತ್ರಕ್ಕೆ ಸ್ಪಂದಿಸಿರುವ ರಾಜ್ಯ ಚುನಾವಣೆ ಆಯೋಗ 2018ರ ಆದೇಶದಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ
ಮೈಸೂರು ದಸರಾದ ಎಲ್ಲ ಕಾರ್ಯಕ್ರಮಗಳಿಗೆ ನೀತಿ ಸಂಹಿತೆಯಿಂದ ವಿನಾಯಿತಿ ದೊರೆತಿದೆ. ಇದರಿಂದ ಜನಪ್ರತಿನಿಧಿಗಳು ಹಾಗೂ ದಸರಾ ಉಪಸಮಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮುಖದಲ್ಲಿ ನಿರಾಳತೆ ಮೂಡಿದೆ.