ಮೈಸೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಅರಮನೆ ಆವರಣದಲ್ಲಿ ತುರ್ತು ಚಿಕಿತ್ಸಾ ಘಟಕ ತೆರೆದು ಚಿಕಿತ್ಸಾ ಸೇವೆ ಆರಂಭಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.
ಅತಿ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ ಮೈಸೂರು ಅರಮನೆ ಆವರಣದಲ್ಲಿ ಕೊರೊನಾ ವೈರಸ್ ಕುರಿತಾಗಿ ಎಚ್ಚರಿಕೆ ವಹಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆ ಅರಮನೆಗೆ ಭೇಟಿ ನೀಡುವ ವಿದೇಶಿಗರು ಸೇರಿದಂತೆ ಇತರ ವ್ಯಕ್ತಿಗಳ ಸುರಕ್ಷತೆ ದೃಷ್ಟಿಯಿಂದ ಈ ವೈರಸ್ ಬಗ್ಗೆ ತಿಳುವಳಿಕೆ ನೀಡುವ ಡಿಸ್ಪ್ಲೇ ಬೋರ್ಡ್ ಹಾಕಲಾಗಿದೆ ಎಂದರು.
ಆವರಣದ ಒಳಗಡೆ ಸ್ವಚ್ಛತೆ ಕಾಪಾಡಿಕೊಳ್ಳಲು ಆದ್ಯತೆ ನೀಡಲಾಗಿದೆ. ಅರಮನೆ ಆವರಣದಲ್ಲಿ ತುರ್ತು ಚಿಕಿತ್ಸಾ ಘಟಕ ತೆರೆದಿದ್ದು, ಪ್ರವಾಸಿಗರಿಗೆ ಮಾಸ್ಕ್ಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುಬ್ರಹ್ಮಣ್ಯ ಹೇಳಿದರು.