ಮೈಸೂರು: ನಗರದ ಕೆ.ಆರ್. ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಲಷ್ಕರ್ ಪೊಲೀಸ್ ಠಾಣಾ ಬಿಲ್ಡಿಂಗ್ ಸೇರಿದಂತೆ ಪಾರಂಪರಿಕ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿವೆ.
ಈಗಾಗಲೇ ಹಲವು ವರ್ಷಗಳಿಂದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕಟ್ಟಡಗಳು ಶಿಥಿಲಗೊಂಡು ಅಪಾಯದ ಅಂಚಿಗೆ ಸರಿದಿದ್ದರೂ ಅವುಗಳ ದುರಸ್ತಿ ಕುರಿತು ನಿರ್ಧಾರ ಕೈಗೊಳ್ಳುವಲ್ಲಿ ಪಾರಂಪರಿಕ ಇಲಾಖೆ ಮನಸ್ಸು ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕೆ.ಆರ್. ಆಸ್ಪತ್ರೆಯ ಪಕ್ಕದಲ್ಲಿರುವ ಕಣ್ಣಿನ ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆಯ ಗೋಡೆ ಚೆಕ್ಕೆ ಉದುರುತ್ತಿದ್ದರೂ ಆಡಳಿತ ಮಂಡಳಿ ಸುಮ್ಮನೆ ಕುಳಿತಿದೆ. ಹೀಗಾಗಿ ಪಾರಂಪರಿಕ ಕಟ್ಟಡಗಳು ಬೀಳುವ ಮುನ್ನ ಅಗತ್ಯ ಕ್ರಮ ಕೈಗೊಳ್ಳುವಂತೆ ಪಾರಂಪರಿಕ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಪರಿಸ್ಥಿತಿ ಕುರಿತು ವಿವರಿಸಲಾಗಿದೆ.