ETV Bharat / state

ಚಾಮುಂಡಿ ಬೆಟ್ಟ, ಮೈಸೂರು ನಗರದಲ್ಲಿ ಸೆಕ್ಷನ್ 144 ಜಾರಿ: ಪೊಲೀಸ್​ ಕಮಿಷನರ್ - ಅಹಿತಕರ ಘಟನೆಗಳು

ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್​ ರಮೇಶ್​ ಬಾನೋತ್​ ತಿಳಿಸಿದ್ದಾರೆ.

ನಗರ ಪೊಲೀಸ್​ ಕಮಿಷನರ್ ರಮೇಶ್ ಬಾನೋತ್
ನಗರ ಪೊಲೀಸ್​ ಕಮಿಷನರ್ ರಮೇಶ್ ಬಾನೋತ್
author img

By ETV Bharat Karnataka Team

Published : Oct 12, 2023, 6:32 PM IST

Updated : Oct 12, 2023, 7:37 PM IST

ನಗರ ಪೊಲೀಸ್​ ಕಮಿಷನರ್ ರಮೇಶ್ ಬಾನೋತ್ ಹೇಳಿಕೆ

ಮೈಸೂರು : ಮಹಿಷಾ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋ ಚಳುವಳಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ಶನಿವಾರ ಬೆಳಗಿನ ಜಾವ 6 ಗಂಟೆಯವರೆಗೆ ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹೇಳಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಹಿಷ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಆಯೋಜಕರು ಪತ್ರ ಸಲ್ಲಿಸಿದ್ದರು. ಆದರೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಮಹಿಷ ದಸರಾ ಆಚರಣೆ ಹಾಗೂ ಚಾಮುಂಡಿ ಚಲೋ ಜಾಥಕ್ಕೆ ಅನುಮತಿ ನಿರಾಕರಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 12/10/2023 ರಿಂದ 14/10/2023 ರವರೆಗೆ ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರ ವ್ಯಾಪ್ತಿಯಲ್ಲಿ 30 ಗಂಟೆಗಳ ಕಾಲದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಉಲ್ಲಂಘನೆ ಮಾಡಿದರೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಹಿಷ ಉತ್ಸವಕ್ಕೆ ಷರತ್ತು ಬದ್ಧ ಅನುಮತಿ: ಮಹಿಷ ದಸರಾ ಸಮಿತಿಯವರು ನಗರ ಪೊಲೀಸ್​ ಕಮಿಷನರ್​ಗೆ ಮತ್ತೊಂದು ಅನುಮತಿ ಕೋರಿ ಪತ್ರ ನೀಡಿದ್ದು, ಮೈಸೂರು ನಗರದ ಟೌನ್​ಹಾಲ್ ಬಳಿ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಕೋರಿಕೊಂಡಿದ್ದಾರೆ. ಇದರನ್ವಯ ಟೌನ್​ಹಾಲ್ ಬಳಿ ಮಹಿಷಾ ಉತ್ಸವ ಸಮಿತಿಗೆ ಕಾರ್ಯಕ್ರಮ ನಡೆಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಉತ್ಸವದ ಹೆಸರಿನಲ್ಲಿ ಮೆರವಣಿಗೆ, ರ‍್ಯಾಲಿ ನಡೆಸಬಾರದು, ಘೋಷಣೆ ಕೂಗಬಾರದು. ಫ್ಲೆಕ್ಸ್ , ಬ್ಯಾನರ್​ಗಳು, ಧ್ವನಿವರ್ಧಕ ಬಳಸುವಂತಿಲ್ಲ. ಮೂರ್ತಿ ಮೆರವಣಿಗೆ ಹಾಗೂ ಕರಪತ್ರ ಹಂಚುವಂತಿಲ್ಲ. ಒಂದು ವೇಳೆ ಷರತ್ತುಗಳನ್ನು ಉಲ್ಲಂಘಿಸಿ ಅಹಿತಕರ ಘಟನೆಗಳು ನಡೆದರೆ ಆಯೋಜಕರೇ ನೇರ ಹೊಣೆ ಎಂದು ತಿಳಿಸಲಾಗಿದೆ ಎಂದರು.

ನಿಷೇಧಾಜ್ಞೆ ಮಹಿಷ ದಸರಾ ಹಾಗೂ ಚಾಮುಂಡಿ ಚಲೋಗೆ ಮಾತ್ರ ಅನ್ವಯವಾಗಲಿದೆ. ಮದುವೆ, ಸಭೆ, ಸಮಾರಂಭ, ಶಾಲಾ-ಕಾಲೇಜುಗಳಿಗೆ ಅನ್ವಯವಾಗುವುದಿಲ್ಲ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ನಿಷೇಧವಿಲ್ಲ. ಎಲ್ಲರನ್ನೂ ತಪಾಸಣೆ ಮಾಡಿ ಬೆಟ್ಟಕ್ಕೆ ಕಳುಹಿಸಲಾಗುವುದು. ಚಾಮುಂಡಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕು ರಸ್ತೆಗಳಲ್ಲೂ ಹೆಚ್ಚಿನ ಪೊಲೀಸ್​ ಬಂದೋಬಸ್ತ್ ಹಾಕಲಾಗುವುದು. ನಾಳೆ ಮೈಸೂರು ನಗರದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ನಗರ ಪೊಲೀಸ್​ ಕಮಿಷನರ್ ಹೇಳಿದ್ದಾರೆ.

ನಾಳೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ: ಪೊಲೀಸ್ ಆಯುಕ್ತರು ಚಾಮುಂಡಿಬೆಟ್ಟದಲ್ಲಿ ನಾಳೆ (ಅ. 13 ) ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಆದೇಶಿಸಲಾಗಿದೆ. ಆದರೆ, ಚಾಮುಂಡಿಬೆಟ್ಟದಲ್ಲಿ ಇರುವ ನಿವಾಸಿಗಳಿಗೆ ತುರ್ತು ಸೇವೆಗೆ ಹಾಗೂ ಅಧಿಕೃತ ಅಧಿಕಾರಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಸರಾ ಉದ್ಘಾಟನೆಗೆ ಅಡಚಣೆ ಆಗಬಾರದು, ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ: ನಗರ ಪೊಲೀಸ್ ಆಯುಕ್ತ

Last Updated : Oct 12, 2023, 7:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.