ಮೈಸೂರು: ಲಾಕ್ ಡೌನ್ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳು ಹಿನಕಲ್ ಬಳಿ ಇರುವ ಭೂಮಿಪುತ್ರ ಬಾರ್ ಮೇಲೆ ದಾಳಿ ಮಾಡಿದ್ದಾರೆ.
ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಸತತ 5 ಗಂಟೆ ಸ್ಟಾಕ್ ಪರಿಶೀಲನೆ ನಡೆಸಿದ್ದಾರೆ.
ಬಾರ್ ಕ್ಲೋಸ್ ಆಗಿದ್ದರೂ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪರಿಶೀಲನೆ ಮುಂದುವರೆದಿದೆ.