ETV Bharat / state

ಎಸ್​ಎಸ್​ಎಲ್​​ಸಿ ಪರೀಕ್ಷೆ ಮುಂದೂಡಿ: ವಾಟಾಳ್​ ನಾಗರಾಜ್​ ಮನವಿ

ಕೊರೊನಾ ಹಾವಳಿಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದು ಕಷ್ಟ. ಪದವಿ ಪರೀಕ್ಷೆ ಮುಂದೂಡಿದಂತೆ ಈ ಪರೀಕ್ಷೆಯನ್ನು ಮುಂದೂಡಬೇಕೆಂದು ವಾಟಾಳ್​ ನಾಗರಾಜ್​ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Vatal Nagaraj
ವಾಟಾಳ್​ ನಾಗರಾಜ್
author img

By

Published : May 24, 2020, 5:00 PM IST

ಮೈಸೂರು: ಕೊರೊನಾ ಭೀತಿ ಹೆಚ್ಚಾಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್​​ಎಲ್​ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ವಾಟಾಳ್​ ನಾಗರಾಜ್​ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹಾವಳಿಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದು ಕಷ್ಟವಾಗಲಿದೆ. ಪದವಿ ಪರೀಕ್ಷೆ ಮುಂದೂಡಿದಂತೆ ಈ ಪರೀಕ್ಷೆಯನ್ನು ಮುಂದೂಡಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ವಲಸೆ ಕಾರ್ಮಿಕರನ್ನು ಕರೆಸಿಕೊಳ್ಳುವ ಹಾಗೂ ಕಳುಹಿಸುವ ವಿಚಾರದಲ್ಲಿ ಸಂಪೂರ್ಣವಾಗಿ ಎಡವಿದ್ದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಸರ್ಕಾರ ಸೋಂಕು ಹರಡದಂತೆ ತಡೆಯಲು ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ವಾಟಾಳ್​ ನಾಗರಾಜ್​ ಮನವಿ

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್​​ನಲ್ಲಿ ಆಯಾ ಆಯಾ ರಾಜ್ಯ ಸರ್ಕಾರಗಳಿಗೆ ಇಂತಿಷ್ಟು ಎಂದು ನಿಗದಿ ಮಾಡಬೇಕೆಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.