ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಭೂತಾಳೆ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಭೂತಾಳೆ ಪೆಂಜಳ್ಳಿ ಗ್ರಾಮದ ವಿಜಯ್ ಅವರ ಪುತ್ರ ಸಂಜಯ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸಂಜಯ್ ನಾಗಪುರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇಂದು ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ನೋಡಿ ಜುಗುಪ್ಸೆಗೊಂಡಿದ್ದ. ಇಂಗ್ಲಿಷ್, ಸಮಾಜ ವಿಜ್ಞಾನದಲ್ಲಿ ಅನುತ್ತೀರ್ಣ ಗೊಂಡಿದ್ದ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಸಂಜಯ್ ತಂದೆ ತಾಯಿ ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮನೆಯಲ್ಲಿ ಬಂದು ನೋಡಿದಾಗ, ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.