ಮೈಸೂರು: ಸ್ವಚ್ಛಭಾರತ್ ಎಂದು ಬೀಗಿಕೊಳ್ಳುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಭಾರತವನ್ನು ಸ್ವಚ್ಛವಾಗಿಡಲು ಶ್ರಮಿಸುವ ಪೌರಕಾರ್ಮಿಕರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರಾದ ಸಿದ್ದರಾಮಯ್ಯ ಹುಂಡಿಯಿಂದ ಕೇವಲ 5 ಕಿ.ಮೀ ದೂರದಲ್ಲಿರುವ ಹಾಗೂ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರ ವ್ಯಾಪ್ತಿಯ ತಾಯೂರು ಗ್ರಾಮದಲ್ಲಿ ಇಂತಹ ಘಟನೆ ನಡೆದಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಪೌರ ಕಾರ್ಮಿಕರೊಬ್ಬರು ಯಾವುದೇ ಸಲಕರಣೆ ಇಲ್ಲದೆ ಹಾಗೂ ರಕ್ಷಾ ಕವಚಗಳಿಲ್ಲದೆ ಚರಂಡಿ ಸ್ವಚ್ಛ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ.