ETV Bharat / state

ತಲೆ ತಿರುಗುತ್ತೆ ಅಂತಾ ಆಸ್ಪತ್ರೆಗೆ ಹೋಗಿದ್ದ ಯುವಕನ ಮೆದುಳು ನಿಷ್ಕ್ರಿಯ.. ಅಂಗಾಂಗ ದಾನದಿಂದ ಐದು ಜನರಿಗೆ ಪುನರ್ಜ​ನ್ಮ - ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ

ಚಿಕಿತ್ಸೆ ಫಲಕಾರಿಯಾಗದೇ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ, ಯುವಕನ ಕುಟುಂಬಸ್ಥರು ಅಂಗಾಂಗ ದಾನ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

family-members-donated-the-organs-of-youth-in-mysore
ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ : ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬಸ್ಥರು
author img

By

Published : Aug 2, 2023, 8:50 PM IST

ಮೈಸೂರು : ಚಿಕಿತ್ಸೆ ಫಲಕಾರಿಯಾಗದೇ ಯುವಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನಲೆ, ಯುವಕನ ಕುಟುಂಬಸ್ಥರು ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್.​ಆರ್​ ರಾಕೇಶ್(28)​ ಎಂಬವರು ತಲೆ ತಿರುಗುವಿಕೆ ಹಿನ್ನೆಲೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇವರ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.

ಕಳೆದ ಜುಲೈ 23ರ ಸೋಮವಾರದಂದು ರಾಕೇಶ್ ಅವರನ್ನು ತಲೆ ತಿರುಗುವಿಕೆ (ಗಿಡ್ಡಿನೆಸ್) ಹಿನ್ನೆಲೆ ಇಲ್ಲಿನ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ರಾಕೇಶ್​ ಅವರನ್ನು ತಪಾಸಣೆ ನಡೆಸಿದ ವೈದ್ಯರಿಗೆ ಸಿಟಿ ಸ್ಕ್ಯಾನ್​ನಲ್ಲಿ ಮೆದುಳಿಗೆ ಗಂಭೀರ ಗಾಯವಾಗಿರುವುದು ಗೊತ್ತಾಗಿದೆ. ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ದಿನಗಳ ಬಳಿಕ ಅಂದರೆ ಜುಲೈ 29ರಂದು ಇವರ ಮೆದುಳು ನಿಷ್ಕ್ರಿಯಗೊಂಡಿದೆ. ಈ ಸಂಬಂಧ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದು, ಅಂಗಾಂಗ ದಾನದ ಕುರಿತು ಸಮಾಲೋಚನೆ ನಡೆಸಿದ್ದಾರೆ. ಬಳಿಕ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು. ರಾಕೇಶ್ ಅವರ 2 ಕಿಡ್ನಿಗಳು, 1 ಲಿವರ್, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ದಾನ ಮಾಡಲಾಗಿದ್ದು, ಈ ಮೂಲಕ ಐದು ಜನರಿಗೆ ಆಸರೆಯಾಗಿದ್ದಾರೆ.

ಅಂಗಾಂಗ ದಾನ ಶಿಷ್ಟಾಚಾರದ ಪ್ರಕಾರ, ಈ ಹಿಂದೆ ZCCK ಎಂದು ಕರೆಯಲ್ಪಡುತ್ತಿದ್ದ ಜೀವ ಸಾರ್ಥಕತೆಯ ಕಾರ್ಯಕ್ರಮದ ಅಧಿಕಾರಿಗಳು “ಅಂಗ ಸ್ವೀಕರಿಸುವವರ ಕಾಯುವ ಪಟ್ಟಿ” ಪ್ರಕಾರದಂತೆ ಮುಂದಿನ ಪ್ರಕ್ರಿಯೆ ಕೈಗೊಂಡರು. ಭಾನುವಾರ ರಾಕೇಶ್ ಅವರ ಅಂಗಾಂಗಗಳಾದ ಎರಡು ಕಿಡ್ನಿಗಳು, ಒಂದು ಲಿವರ್ ಮತ್ತು ಹೃದಯದ ಕವಾಟಗಳು ಹಾಗೂ ಕಾರ್ನಿಯಾಗಳನ್ನು ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಕ್ರಾಸ್ ಕ್ಲ್ಯಾಂಪ್ ಮಾಡಲಾಯಿತು.

ಮೈಸೂರಿನ ಅಪೊಲೋ ಬಿಜಿಎಸ್ ಆಸ್ಪತ್ರೆಗೆ ಒಂದು ಕಿಡ್ನಿ, ಲಿವರ್ ಮತ್ತು ಜೆಎಸ್‌ಎಸ್ ಆಸ್ಪತ್ರೆಗೆ ಒಂದು ಕಿಡ್ನಿ, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಹೃದಯ ಕವಾಟಗಳು ಹಾಗೂ ಕೆ.ಆರ್. ಆಸ್ಪತ್ರೆಗೆ ಕಾರ್ನಿಯಾಗಳು ದಾನ ಮಾಡಲಾಗಿದೆ.

ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (STATE ORGAN AND TISSUE TRANSPLANT ORGANIZATION-SOTTO) ಅಡಿಯಲ್ಲಿ ಅಂಗಾಂಗ ಕಸಿಗಾಗಿ ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆ ಪರವಾನಗಿ ಪಡೆದಿದೆ. ಅಂಗಾಂಗ ಕಸಿಗಾಗಿ ಹೊಂದಾಣಿಕೆ ಸೌಲಭ್ಯವನ್ನು ಸುಲಭಗೊಳಿಸುವ ಸಂಬಂಧ ಅಪೋಲೊ ಬಿಜಿಎಸ್ ಆಸ್ಪತ್ರೆಯೊಂದಿಗೆ SOTTO ಒಪ್ಪಂದ ಮಾಡಿಕೊಂಡಿದೆ. ಅದರಂತೆ ಅಂಗಾಂಗ ಕಸಿಗೆ ಒಳಗಾಗುವ ರೋಗಿಗಳ ಕ್ರಾಸ್ ಮ್ಯಾಚಿಂಗ್​ನ್ನು ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತದೆ. ಇದರಿಂದ ಬೆಂಗಳೂರಿಗೆ ತೆರಳುವ ಸಮಯವು ಉಳಿತಾಯವಾಗುವುದರಿಂದ ಅಂಗಾಂಗ ಕಸಿಗೆ ಬೇಕಾದ ನಿರ್ಣಾಯಕ ಸಮಯವೂ ಉಳಿಯುತ್ತದೆ.

ಇದನ್ನೂ ಓದಿ : ಯುವಕನ ಮಿದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.