ETV Bharat / state

ಡಿ.23ರಂದು ಬೆಂಗಳೂರಿನಲ್ಲಿ ರೈತರ ಮಹಾಧಿವೇಶನ: ಮೈಸೂರಲ್ಲಿ ಭಿತ್ತಿಪತ್ರ ಬಿಡುಗಡೆ - ರೈತರ ಮಹಾಧಿವೇಶನದ ಭಿತ್ತಿಪತ್ರ

ಬೆಂಗಳೂರಿನಲ್ಲಿ ಡಿ.23ರಂದು ನಡೆಯಲಿರುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು.

ರೈತರ ಮಹಾಧಿವೇಶನ ಭಿತ್ತಿಪತ್ರ ಬಿಡುಗಡೆ
ರೈತರ ಮಹಾಧಿವೇಶನ ಭಿತ್ತಿಪತ್ರ ಬಿಡುಗಡೆ
author img

By ETV Bharat Karnataka Team

Published : Dec 19, 2023, 8:25 AM IST

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯಿಂದ ಡಿ.23ರಂದು ನಡೆಯುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು.

ನಗರದ ಜಲದರ್ಶಿನಿಯಲ್ಲಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ದೇಶದ ಎಲ್ಲ ರಾಜ್ಯದ ರೈತ ಸಂಘಟನೆಗಳು ಒಗ್ಗೂಡಿ ಡಿ.20 ರಂದು ಕೇರಳದ ಪಾಲಕಾಡ್​ನಲ್ಲಿ, ಡಿ.21 ತಮಿಳುನಾಡಿನ ಚೆನ್ನೈನಲ್ಲಿ, ಡಿ.23 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಮತ್ತು ಡಿ.26ರಂದು ತೆಲಂಗಾಣದ ಹೈದರಾಬಾದ್​ನಲ್ಲಿ ಬೃಹತ್ ಅಧಿವೇಶನಗಳನ್ನು ನಡೆಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ನಡೆಯಲಿದೆ ಎಂದರು.

ಬೆಂಗಳೂರಿನಲ್ಲಿ ಮಹಾಧಿವೇಶನ: ರೈತರ ಬೆಳೆ ಸಾಲದ ಬಡ್ಡಿಮನ್ನಾ ಎನ್ನುವುದು ನಾಟಕೀಯವಾಗಿದೆ. ರೈತರ ಕೃಷಿ ಸಾಲ ಸಂಪೂರ್ಣ ಮನ್ನಾಕ್ಕಾಗಿ ಡಿ.23 ರಂದು ಬೆಂಗಳೂರಿನಲ್ಲಿ ರೈತರ ಮಹಾಧಿವೇಶನ ನಡೆಯಲಿದೆ. ಸಾಲ ಮನ್ನಾ ಆಗದಂತೆ ವಂಚಿಸಲು ಬ್ಯಾಂಕುಗಳು ಬಡ್ಡಿ ದುಪ್ಪಟ್ಟು ಆಗುತ್ತದೆ, ಸುಸ್ತಿಯಾಗುತ್ತದೆ ಎಂದು ಹೆದರಿಸಿ ಆಂಗ್ಲ ಭಾಷೆಯ ಪತ್ರಕ್ಕೆ ರೈತರ ಸಹಿ ಪಡೆದು ಸಾಲ ನವೀಕರಣ ಮಾಡುತ್ತಿದ್ದಾರೆ. ಇದರಿಂದ ರೈತರು ಸಾಲ ಮನ್ನಾದಿಂದ ವಂಚಿತವಾಗುತ್ತಿದ್ದಾರೆ. ಈ ಬಗ್ಗೆ ರೈತರು ಜಾಗೃತರಾಗಿರಬೇಕು ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿಯ ಪ್ರವಾಹದಿಂದ ಹಾನಿ, ಅನಾವೃಷ್ಟಿಯಿಂದ ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿ ಬೆಳೆ ನಾಶವಾಗಿ ಕೈಸುಟ್ಟಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಕ್ಕಾಗಿ ಸಾಲಮನ್ನಾ ಆಗಲೇಬೇಕೆಂದು ಒತ್ತಾಯಿಸಿದರು.

ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ಅದೇ ಮಾದರಿ ರೈತರ ಸಾಲ ಮನ್ನಾ ಮಾಡಬೇಕು. ಇದೇ ದಿನ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಡಿ.23 ರಂದು ಸಾಲ ಮನ್ನಾ ಕೋರಿಕೆ ಅರ್ಜಿ ಸಲ್ಲಿಸಲಾಗುತ್ತದೆ. ಸಾಲ ಪಡೆದ ರೈತರೇ ಈ ಅಧಿವೇಶನಕ್ಕೆ ಸ್ವಯಂ ಪ್ರೇರಿತರಾಗಿ ಬರಬೇಕು ಎಂದು ಮನವಿ ಮಾಡಿದರು.

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ: ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಆಗಬೇಕು. ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಈ ಕಾನೂನು ಜಾರಿ ಮಾಡಬೇಕೆಂದು ಹೇಳಿದರು. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದು, ರಾಜ್ಯ ಸರ್ಕಾರ 2000ರೂ ಭಿಕ್ಷಾ ರೂಪದ ಪರಿಹಾರ ನೀಡುವುದು ಬೇಡ. ಸಂಪೂರ್ಣ ಬೆಳೆ ನಷ್ಟ ಪರಿಹಾರ ಕನಿಷ್ಠ 25,000 ರೂ. ನಿಡಬೇಕೆಂದರು. ಕೇಂದ್ರ ಸರ್ಕಾರ ಸಕ್ಕರೆ ರಪ್ತು ನಿಷೇಧ, ಯಥನಾಲ್ ಉತ್ಪಾದನೆಗೆ ತಡೆ ಹಾಕಿರುವುದು ಕಬ್ಬು ಬೆಳೆಯುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ ಕೇಂದ್ರ ಸರ್ಕಾರ ಈ ಬಗ್ಗೆ ಮರುಪರಿಶೀಲನೆ ನಡೆಸಲಿ ಎಂದು ಒತ್ತಾಯಿಸುತ್ತೇವೆ ಎಂದರು.

ಪಂಜಾಬ್ ರಾಜ್ಯದಲ್ಲಿ ಟನ್​ ಕಬ್ಬಿಗೆ 4000 ರೂ. ನಿಗದಿ ಮಾಡಿದ್ದಾರೆ. ರಾಜ್ಯದಲ್ಲಿ ಎರಡು ಮೂರು ಸಭೆಗಳಾದರೂ ಬಣ್ಣಾರಿ ಸಕ್ಕರೆ ಕಾರ್ಖಾನೆ ಮಣಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ತೂಕದಲ್ಲಿ ಮೋಸ ಇಳುವರಿಯಲ್ಲಿ ಮೋಸ ಹಣ ಪಾವತಿಯಲ್ಲಿ ಮೋಸ ಮಾಡುತ್ತಿದ್ದರೂ ಸರ್ಕಾರ ಕಾರ್ಖಾನೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಈ ಕೂಡಲೇ ವಂಚನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚಿಸಿ ಕ್ರಮ ಕೈಗೊಳ್ಳಬೇಕು.

5000 ತಿಂಗಳ ಪಿಂಚಣಿ: ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇ.10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು. ರೈತರ ಮಕ್ಕಳು ಕೃಷಿಯಿಂದ ವಲಸೆ ಹೋಗುವುದನ್ನು ತಪ್ಪಿಸಬೇಕು ಎಂದರು.

ಇದನ್ನೂ ಓದಿ: ನೆಲಮಂಗಲ: ನ್ಯಾಯಬೆಲೆ ಅಂಗಡಿ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.