ಮೈಸೂರು: ಮಳೆ ಬಾರದೆ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮುದ್ದಿನಹಳ್ಳಿ ಗ್ರಾಮದ ವಿರೂಪಾಕ್ಷ (55) ಆತ್ಮಹತ್ಯೆಗೆ ಶರಣಾದ ರೈತ. ವಿರೂಪಾಕ್ಷ ತನ್ನ 3 ಎಕರೆ ಜಮೀನಿನಲ್ಲಿ ತಂಬಾಕು ಬೆಳೆದಿದ್ದ. ಆದರೆ ಮಳೆ ಕೈ ಕೊಟ್ಟ ಕಾರಣ ತಂಬಾಕು ಬೆಳೆ ಒಣಗಿದ್ದು, ತಂಬಾಕು ಬೆಳೆಯಲು ಕಾವೇರಿ ಗ್ರಾಮೀಣ ಬ್ಯಾಂಕ್ ಹಾಗೂ ಇತರ ವ್ಯಕ್ತಿಗಳಿಂದ ಸುಮಾರು 10 ಲಕ್ಷ ಸಾಲ ಪಡೆದಿದ್ದ ಎನ್ನಲಾಗಿದೆ.
ಈ ಹಿನ್ನೆಲೆ ಮನನೊಂದು ಈತ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸಾಲಿ ಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.