ETV Bharat / state

ಸ್ವಾತಂತ್ರ್ಯ ದಿನಾಚರಣೆಯಂದು ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಕಪ್ಪು ಪಟ್ಟಿ ಧರಿಸಿ ಕರಾಳ ಸ್ವಾತಂತ್ರ್ಯ ದಿನ ಎಂದು ಆಚರಣೆ ಮಾಡಿದ್ದಾರೆ.

ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ರೈತರು
ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ರೈತರು
author img

By

Published : Aug 16, 2020, 7:57 AM IST

Updated : Aug 16, 2020, 10:37 AM IST

ಮೈಸೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ರೈತರು ಕಪ್ಪು ಪಟ್ಟಿ ಧರಿಸಿ ಕರಾಳ ಸ್ವಾತಂತ್ರ್ಯ ದಿನ ಆಚರಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ

ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಆದರೆ ರೈತರು ಕಪ್ಪು ಪಟ್ಟಿ ಧರಿಸಿ ಕರಾಳ ಸ್ವಾತಂತ್ರ್ಯ ದಿನ ಎಂದು ಆಚರಣೆ ಮಾಡಿದ್ದು, ಸರ್ಕಾರ ಜಾರಿಗೆ ತರುತ್ತಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಳಿಕ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ಜಿಲ್ಲಾಧಿಕಾರಿ ಕಚೇರಿಯಿಂದ ನ್ಯಾಯಾಲಯದ ಗಾಂಧಿ ಪತ್ರಿಮೆವರೆಗೆ ಕಬ್ಬು ಹಿಡಿದು ಱಲಿ ನಡೆಸಿದರು. ಕೋರ್ಟ್ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರೈತರು ಹತ್ತಿ ಗಿಡಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ, ಸರ್ಕಾರಕ್ಕೆ ರೈತರು ಬೇಕಿಲ್ಲ. ನಮ್ಮನ್ನು ಆಳುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಿರಬಹುದು ರಾಜ್ಯದಲ್ಲಿ ಸಿಎಂ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಆಗಿರಬಹುದು, ಯಾರಿಗೂ ಕೂಡ ಈ ದೇಶದ ಕೃಷಿಕರು ಬೇಕಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

Last Updated : Aug 16, 2020, 10:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.