ಮೈಸೂರು: ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಾರಿಗೆ ಬಸ್ನಲ್ಲಿದ್ದ ಸಿಎಂ ಭಾವಚಿತ್ರಕ್ಕೆ ರೈತನೊಬ್ಬರು ಅವಮಾನ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಇಂದು ದೇಶದಾದ್ಯಂತ ರೈತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗ ರೈತರು ಪ್ರತಿಭಟನೆ ನಡೆಸಿ, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ರೈತರನ್ನು ಪೊಲೀಸರು ಬಂಧಿಸಲು ಮುಂದಾದಾಗ ರೈತನೊಬ್ಬ ಪೊಲೀಸ್ ಕಣ್ಣು ತಪ್ಪಿಸಿ ಸಾರಿಗೆ ಬಸ್ನಲ್ಲಿದ್ದ ಸಿಎಂ ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದರು.