ಮೈಸೂರು: ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಮನವಿ ನೀಡಲು ರೈತರು ಬಂದಿದ್ದಾರೆ. ಈ ವೇಳೆ, ಓರ್ವ ರೈತ ಮಾತ್ರ ಹೋಗಿ ಮನವಿ ನೀಡಿ ಬನ್ನಿ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೆ ಅಸಮಾಧಾನಗೊಂಡ ರೈತರು, ನಮ್ಮ ಬಳಿಯೇ ಸಚಿವರನ್ನ ಕರೆಸಿ ಎಂದು ಒತ್ತಡ ಹಾಕಿದ್ದಕ್ಕೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ.
ಈ ಹಿನ್ನೆಲೆ ಪರಿಸ್ಥಿತಿ ಶಾಂತಗೊಳಿಸಲು ಕೆಲ ರೈತರನ್ನು ಬಂಧಿಸಿದ ಪೊಲೀಸರು, ನಂತರ ಬಿಡುಗಡೆ ಮಾಡಿ ಕಳುಹಿಸಿದ್ದಾರೆ.