ETV Bharat / state

ಮೈಸೂರು : ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದುಕೊಂದ ಪಾಪಿ ತಂದೆ

author img

By ETV Bharat Karnataka Team

Published : Oct 19, 2023, 12:35 PM IST

ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

father-killed-son-by-throwing-into-the-lake-at-mysore
ಮೈಸೂರು : ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದುಕೊಂದ ಪಾಪಿ ತಂದೆ

ಮೈಸೂರು : ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್​ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್​ನನ್ನು ಬಂಧಿಸಿದ್ದಾರೆ.

2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಪುತ್ರಿಯರು ಇದ್ದರು. ಬಳಿಕ ಲಕ್ಷ್ಮಿ ಮತ್ತೊಂದು ಗಂಡು ಮಗುವಿಗೆ ಜನ್ಮ ನೀಡಿ ಇಹಲೋಕ ತ್ಯಜಿಸಿದರು.

ನಂತರ ಗಣೇಶ್ ದೇವನಹಳ್ಳಿಯಿಂದ ತಮ್ಮ ಸ್ವಗ್ರಾಮ ಪಿರಿಯಾಪಟ್ಟಣದ ಮಾಕೋಡಿಗೆ ಬಂದು ವಾಸಿಸಲು ಆರಂಭಿಸಿದ್ದರು. ಈ ವೇಳೆ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಅತ್ತೆಯ ಬಳಿಯೇ ಬಿಟ್ಟು ಬಂದಿದ್ದರು. ಆದರೆ ಒಂದೂವರೆ ವರ್ಷದ ಮಗನನ್ನು ತನ್ನ ಬಳಿ ಇಟ್ಟುಕೊಂಡಿದ್ದರು. ಈ ವೇಳೆ ಮಗ ತುಂಬಾ ಅಳುತ್ತಿದ್ದ. ಈ ಹಿನ್ನೆಲೆ ಮಗನನ್ನು ಸಾಕಲಾಗದೇ ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಘಟನೆ ಸಂಬಂಧ ಗಣೇಶ್ ಅವರ ಅತ್ತೆ ಅಂಜನಮ್ಮ ಪಿರಿಯಾಪಟ್ಟಣ ಪೊಲೀಸರಿಗೆ ಗಣೇಶ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಗಣೇಶ್​ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಣೇಶ್​, ತನ್ನ ತಾಯಿ ಮತ್ತು ಅತ್ತೆ ಮಗುವನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಅದು ಸದಾ ಅಳುತ್ತಿತ್ತು. ಜೊತೆಗೆ ಅದನ್ನು ಸಾಕಲು ನನಗೆ ಕಷ್ಟ ಆಯಿತು. ಈ ಹಿನ್ನೆಲೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮಗುವನ್ನು ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿ, ಮಗುವಿನ ತಂದೆಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತ್ಯೇಕ ಘಟನೆ - ಒಂದೇ ಕುಟುಂಬದ ಐವರನ್ನು ಕೊಂದ ಮಹಿಳೆಯರ ಬಂಧನ : ಒಂದೇ ಕುಟುಂಬದ ಐವರಿಗೆ ವಿಷ ಹಾಕಿ ಹತ್ಯೆ ಮಾಡಿದ್ದ ಘಟನೆ ಮಹಾರಾಷ್ಟ್ರ ಗಡ್ಚಿರೋಲಿ ಎಂಬಲ್ಲಿ ಇತ್ತೀಚೆಗೆ ನಡೆದಿತ್ತು. ಪ್ರಕರಣ ಸಂಬಂಧ ಇಬ್ಬರು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿ ವಿವಾದ ಹಿನ್ನೆಲೆ ಈ ಇಬ್ಬರು ಮಹಿಳೆಯರು ವಿಷ ಹಾಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಸಂಘಮಿತ್ರ ಕುಂಬಾರೆ ಮತ್ತು ರೋಸಾ ರಾಮ್ಟೆಕೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಒಂದೇ ಕುಟುಂಬದ ಐವರಿಗೆ ವಿಷ ಉಣಿಸಿ ಹತ್ಯೆ ಮಾಡಿದ್ದ ಇಬ್ಬರು ಮಹಿಳೆಯರು ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.