ಮೈಸೂರು: ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ, ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು. ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಪಿಎಸ್ಐ ಒಬ್ಬರಿಂದ ವಂಚನೆ.. ವಿಜಯಪುರ ಯುವಕನ ಆರೋಪ