ETV Bharat / state

ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು - ದೇವರಾಜ ಪೊಲೀಸ್​ ಠಾಣೆ

Fir against Pratap Simha: ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ದೂರಿನ ಮೇರೆಗೆ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

fir-against-mp-pratap-simha-in-mysore
ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು
author img

By ETV Bharat Karnataka Team

Published : Dec 27, 2023, 9:43 AM IST

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಂಸದ ಪ್ರತಾಪ ಸಿಂಹ ವಿರುದ್ಧ ಇಲ್ಲಿನ ದೇವರಾಜ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡರು ನೀಡಿದ ದೂರಿನ ಮೇರೆಗೆ 1860ರ ಐಪಿಸಿ 504, 153ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್​ ಪ್ರತಿಭಟನೆ, ದೂರು: ಸಂಸದ ಪ್ರತಾಪ ಸಿಂಹ ವಿರುದ್ಧ ಮಂಗಳವಾರ ರಾತ್ರಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರು-ಹುಣಸೂರು ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಜಲದರ್ಶಿನಿ ಅತಿಥಿಗೃಹದಲ್ಲಿರುವ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಇತ್ತೀಚೆಗೆ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ ಸಿಂಹ ಅವರು, ಸಿಎಂ ಸಿದ್ದರಾಮಯ್ಯರಿಗೆ ಸೋಮಾರಿ ಸಿದ್ದನ ರೀತಿ ಎಂಬ ಪದ ಬಳಸಿದ್ದಾರೆ ಎಂದು ಪ್ರತಿಭಟನಾಕಾರರು ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದರು.

fir-against-mp-pratap-simha-in-mysore
ಕಾಂಗ್ರೆಸ್​ ಪ್ರತಿಭಟನೆ

ಸಿದ್ದರಾಮಯ್ಯ ಅವರ ವಯಸ್ಸೆಷ್ಟು, ಪ್ರತಾಪ್ ಸಿಂಹ ವಯಸ್ಸೆಷ್ಟು? ಸಿದ್ದರಾಮಯ್ಯ ರಾಜಕೀಯಕ್ಕೆ ಬಂದಾಗ ಇವರು ಎಲ್ಲಿದ್ದರು. ಮುಖ್ಯಮಂತ್ರಿಗೆ ಸೋಮಾರಿ ಸಿದ್ದ ಎಂದು ಹೇಳಿದ್ದಾರೆ. ಸುಖಾಸುಮ್ಮನೆ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಯಾವ ಚಳವಳಿ ಮಾಡಿಕೊಂಡು ಬಂದಿದ್ದಾರೆ. ಮೋದಿ ಬಗ್ಗೆ ಪುಸ್ತಕ ಬರೆದು ಲೋಕಸಭೆ ಟಿಕೆಟ್ ಗಿಟ್ಟಿಸಿಕೊಂಡರು. ಗೌರವಾನ್ವಿತ ವ್ಯಕ್ತಿಗೆ ಸೋಮಾರಿ ಎಂದು ಹೇಳಿರುವುದು ಖಂಡನೀಯ ಎಂದರು.

ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಸಿಂಹ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಒತ್ತಾಯಿಸಿ​ ದೇವರಾಜ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾಂಗ್ರೆಸ್​ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಬಿ ಜೆ ವಿಜಯಕುಮಾರ್ ಅವರು ಪೊಲೀಸರಿಗೆ ಲಿಖಿತ ದೂರು ನೀಡಿದ್ದರು.

ಇದನ್ನೂ ಓದಿ: ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಅಂತ ಜನ ತೀರ್ಮಾನಿಸುತ್ತಾರೆ: ಸಂಸದ ಪ್ರತಾಪ್ ಸಿಂಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.