ಮೈಸೂರು : ಜಿಲ್ಲೆಯಲ್ಲೀಗ 2ನೇ ಹಂತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹೊಸದಾಗಿ 5 ಮಂದಿಗೆ ಸೋಂಕು ಧೃಡಪಟ್ಟಿದೆ. ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹೊರ ಜಿಲ್ಲೆಯಿಂದ ಬಂದವರಿಂದ ಸೋಂಕಿತರು ಹೆಚ್ಚಾಗುತ್ತಿದ್ದು, ಇಂದು ಕೂಡ 5 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 223 ಆಗಿದ್ದು, ಅದರಲ್ಲಿ 126 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಕೂಡ ಒಬ್ಬರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 96 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಬ್ಬರು ಸಾವನ್ನಪ್ಪಿದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಾಹಿತಿ ನೀಡಿದರು.