ಮೈಸೂರು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ತೆರಳುವಾಗ ಕಾಂಗ್ರೆಸ್ ಕಾರ್ಯಕರ್ತನೊರ್ವನ ಕೆನ್ನೆಗೆ ಹೊಡೆದು ಹೋಗುವ ದೃಶ್ಯವನ್ನು ಎಲ್ಲ ಮಾಧ್ಯಮಗಳು ಬಿತ್ತರ ಮಾಡಿದ್ದವು. ಇದೀಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನನಗೆ ಪುತ್ರನ ಸಮಾನನಾದ ನಂದನಹಳ್ಳಿ ರವಿ ನಾನು ಬೆಳೆಸಿದ ಯುವನಾಯಕ, ಇಂತಹ ನೂರಾರು ಯುವಕರು ನನ್ನ ಜತೆ ಇರ್ತಾರೆ. ಅವರ ಜೊತೆ ಪ್ರೀತಿ-ಕೋಪದಿಂದ ಇರುವ ಸಂಬಂಧ ನನ್ನದು. ಅವನಿಗೆ ಹುಸಿ ಕೋಪದಿಂದ ಕೆನ್ನೆಗೆ ಹೊಡೆದಿದ್ದೆ. ಅದಕ್ಕೆ ವಿಪರೀತವಾಗಿ ಬೇರೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ರವಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾನೆ’ ಎಂದಿದ್ದಾರೆ.