ಮೈಸೂರು: ದೇಶ ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವದ ಕಡೆ ವಾಲುತ್ತಿದೆ ಎಂದು ರಾಷ್ಟ್ರೀಯ ರಾಜಕೀಯ ವಿದ್ಯಮಾನಗಳನ್ನು ಕುರಿತು ಮಾಜಿ ಸಚಿವ ಹೆಚ್. ವಿಶ್ವನಾಥ್ ವ್ಯಾಖ್ಯಾನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಿಷ್ಠಾವಂತ ಮುಖಂಡರನ್ನು ಕಡೆಗಣಿಸುತ್ತಿದೆ. ಇದರ ಪರಿಣಾಮ ಕರ್ನಾಟಕ ಹಾಗೂ ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ರಾಜಸ್ಥಾನದಲ್ಲಿ ಮಹತ್ತರ ಬದಲಾವಣೆಯಾಗಲಿದೆ ಎಂದು ಅವರು ವಿಶ್ಲೇಷಣೆ ಮಾಡಿದರು.
ಕಾಂಗ್ರೆಸ್‌ನಲ್ಲಿ ರಾಹುಲ್ ಗಾಂಧಿ ಕುಟುಂಬದವರು, ಜೆಡಿಎಸ್‌ನಲ್ಲಿ ಹೆಚ್. ಡಿ. ದೇವೇಗೌಡ ಕುಟುಂಬದವರು, ರಾಜ್ಯದಲ್ಲಿ ಸಿದ್ದರಾಮಯ್ಯರ ರಾಜಪ್ರಭುತ್ವ ನಡೆಯುತ್ತಿತ್ತು. ಆದರೆ, ಇವೆಲ್ಲವನ್ನು ಧಿಕ್ಕರಿಸಿ ಅಧಿಕಾರ ಪ್ರಜಾಪ್ರಭುತ್ವದೆಡೆಗೆ ಜಾರುತ್ತಿದೆ. ಸಿದ್ದರಾಮಯ್ಯ 4 ಬಾರಿ ಪಕ್ಷಾಂತರ ಮಾಡಿದ್ದಾರೆ. ರಮೇಶ್ ಕುಮಾರ್ 10 ಬಾರಿ ಪಕ್ಷಾಂತರ ಮಾಡಿದ್ದಾರೆ. ಕುಮಾರಸ್ವಾಮಿ ಪಕ್ಷವನ್ನೇ ಪಕ್ಷಾಂತರ ಮಾಡಿದ್ದಾರೆ. ಇಂಥವರೆಲ್ಲ ನಮ್ಮನ್ನು ಪಕ್ಷಾಂತರಿಗಳು ಎಂದು ಕರೆಯುತ್ತಾರೆ ಎಂದು ಛೇಡಿಸಿದರು.
ರಾಜಸ್ಥಾನದ ರಾಜಕೀಯ ಬೆಳವಣಿಗೆಗೆ ಕರ್ನಾಟಕ ಮಾದರಿ ಕಾರಣ. ನಾವು ಹುಟ್ಟುಹಾಕಿದ ಸಂಸ್ಕೃತಿಯಿಂದ ಇಷ್ಟೆಲ್ಲ ಬೆಳವಣಿಗೆ ಆಗುತ್ತಿದೆ. 'ಐ ಫೀಲ್ ಪ್ರೌಡ್' ಎಂದು ಹೇಳಿದರು.