ETV Bharat / state

ಯಾರನ್ನೂ ಏಕಾಏಕಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಧ್ರುವ ನಾರಾಯಣ್

author img

By

Published : Jul 29, 2021, 4:05 PM IST

ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿರುವವರು ಮರಳಿ‌ ಪಕ್ಷಕ್ಕೆ ಬರುವುದಾದರೆ ಏಕಾಏಕಿ ಅವರನ್ನು‌ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲು ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ‌ಸಮಿತಿ ರಚನೆ ಮಾಡಲಾಗಿದೆ ಎಂದು ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತಿಳಿಸಿದ್ದಾರೆ.

former-mp-dhruva-narayan
ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಧ್ರುವ ನಾರಾಯಣ್

ಮೈಸೂರು: ಕಾಂಗ್ರೆಸ್ ತೊರೆದಿರುವವರು ಮರಳಿ ಪಕ್ಷಕ್ಕೆ ಬಂದರೆ ಏಕಾಏಕಿ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಹೇಳಿಕೆ ನೀಡಿದ್ದಾರೆ. ಇಂದು ಕಾಂಗ್ರೆಸ್ ಭವನದಲ್ಲಿ‌ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಜಿಲ್ಲೆಗೆ ಶನಿವಾರ ಕರ್ನಾಟಕ‌ ರಾಜ್ಯದ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ ಆಗಮಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಯ ಮುಖಂಡರ ಜೊತೆ ಪಕ್ಷದ ಸಂಘಟನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಧ್ರುವ ನಾರಾಯಣ್

ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿರುವವರು ಮರಳಿ‌ ಪಕ್ಷಕ್ಕೆ ಬರುವುದಾದರೆ ಏಕಾಏಕಿ ಅವರನ್ನು‌ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲು ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ‌ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿ ಪರಿಶೀಲನೆ ನಡೆಸಿದರೆ ಮುಂದಿನ ಕ್ರಮ ಕೈಗೊಳ್ಖುತ್ತೇವೆ. ಈ ವಿಚಾರದಲ್ಲಿ ಬೇರೆಯವರು ಮಧ್ಯ ಪ್ರವೇಶ ಮಾಡಲು ಅವಕಾಶವಿಲ್ಲ. ಸಮಿತಿ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದರು.

ಬಸವರಾಜ ಬೊಮ್ಮಾಯಿ‌ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಸೇರುವುದಿಲ್ಲ ಎಂಬ ಅವರ ಹೇಳಿಕೆ ಆ ಪಕ್ಷಕ್ಕೆ ಬಿಟ್ಟಿದ್ದು. ಅವರ ಆಂತರಿಕ ವಿಚಾರವನ್ನು ನಾನು ಮಾತನಾಡುವುದಿಲ್ಲ‌ ಎಂದು ತಿಳಿಸಿದರು.

ಇದನ್ನೂ ಓದಿ: ಹುಟ್ಟೂರು ಭೇಟಿಯಲ್ಲೇ ಗೈರಾದ ಬಿಜೆಪಿ ನಾಯಕರು!.. ಒಬ್ಬಂಟಿಯಾದ್ರಾ ನೂತನ ಸಿಎಂ ಬೊಮ್ಮಾಯಿ?

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.