ETV Bharat / state

ಉತ್ತರ ಪ್ರದೇಶ ಘಟನೆ ಖಂಡಿಸಿ ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ - ಮೈಸೂರು ಸುದ್ದಿ

ಎನ್​ಸಿಆರ್​ಬಿ ವರದಿ ಪ್ರಕಾರ ಅತ್ಯಾಚಾರ, ಅಪರಾಧ, ಅಪಹರಣ, ಕೊಲೆ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮೊದಲ‌ ಸ್ಥಾನದಲ್ಲಿದೆ. ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಇಂತಹ ಸರ್ಕಾರವನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ಒತ್ತಾಯಿಸಿದರು.

ಮಾಜಿ ಸಂಸದ ಆರ್.ಧ್ರುವನಾರಾಯಣ ಪ್ರತಿಕ್ರಿಯೆ
ಮಾಜಿ ಸಂಸದ ಆರ್.ಧ್ರುವನಾರಾಯಣ ಪ್ರತಿಕ್ರಿಯೆ
author img

By

Published : Oct 2, 2020, 3:38 PM IST

ಮೈಸೂರು: ಅಪರಾಧ ಕೃತ್ಯಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಉತ್ತರಪ್ರದೇಶದ ಸರ್ಕಾರವನ್ನ ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ ಒತ್ತಾಯಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಎನ್​ಸಿಆರ್​ಬಿ ವರದಿ ಪ್ರಕಾರ ಅತ್ಯಾಚಾರ, ಅಪರಾಧ, ಅಪಹರಣ, ಕೊಲೆ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮೊದಲ‌ ಸ್ಥಾನದಲ್ಲಿದೆ. 2019ರಲ್ಲಿ ದಾಖಲಾಗಿರುವ 47,999 ಪ್ರಕರಣಗಳ ಪೈಕಿ ಉತ್ತರ ಪ್ರದೇಶದಲ್ಲೇ 11,829 ಪ್ರಕರಣಗಳು ದಾಖಲಾಗಿವೆ. ಇಂತಹ ಸರ್ಕಾರವನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ, ಅಮಾನುಷವಾಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ‌ಇದರಿಂದ ಇಡೀ ದೇಶವೇ ತಲೆ ತಗ್ಗಿಸುವಂತಾಗಿದೆ.‌ ಈ ಬಗ್ಗೆ ಪ್ರಧಾನಿ ಮೋದಿಯಾಗಲಿ ಅಥವಾ ಅಲ್ಲಿನ‌ ಸಿಎಂ ಆಗಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಕೂಡ ಮುಂದಾಗಿಲ್ಲ. ಸಂತ್ರಸ್ತೆಯ ಶವವನ್ನು ಮಧ್ಯರಾತ್ರಿಯಲ್ಲಿ ಪೊಲೀಸರು ಸಂಸ್ಕಾರ ಮಾಡಿದ್ದು, ಆತಂಕವನ್ನುಂಟು ಮಾಡಿದೆ ಎಂದರು.

ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭಯದ ವಾತಾವರಣ ಸೃಷ್ಟಿಯಾಗಿದೆ. ಇದು ಹೀಗೆ ಮುಂದುವರಿದರೆ ಜನಸಾಮಾನ್ಯರ ಗತಿಯೇನು?‌ ಎಂದು ಪ್ರಶ್ನಿಸಿದರು. ಅಲ್ಲದೆ, ಇಂತಹ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.