ETV Bharat / state

ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ಆಧರಿಸಿ ನಾಲ್ವರ ಬಂಧನ - ಡೆತ್ ನೋಟ್ ಆಧರಿಸಿ ನಾಲ್ವರ ಬಂಧನ

ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಡೆತ್​ನೋಟ್ ಆಧರಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ

author img

By ETV Bharat Karnataka Team

Published : Aug 31, 2023, 3:48 PM IST

Updated : Aug 31, 2023, 5:11 PM IST

ಮೈಸೂರು: ನಗರದ ಚಾಮುಂಡಿ ಪುರಂನ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್​ನೋಟ್ ಆಧಾರದ ಮೇಲೆ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ನಾಲ್ವರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕಳೆದ ಭಾನುವಾರ ಚಾಮುಂಡಿ ಪುರಂನ ಮೊದಲನೇ ಮುಖ್ಯರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹದೇವ ಸ್ವಾಮಿ, ಅವರ ಪತ್ನಿ ಅನಿತಾ ಮತ್ತು ಇಬ್ಬರು ಪುತ್ರಿಯರಾದ ಧನಲಕ್ಷ್ಮಿ ಹಾಗೂ ಚಂದ್ರಕಲಾ ಶವವಾಗಿ ಪತ್ತೆಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿತ್ತು. ಕೆ.ಆರ್.ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆತ್ಮಹತ್ಯೆಗೆ ಕಾರಣ ತಿಳಿಸಿದ ಡೆತ್ ನೋಟ್: ಆತ್ಮಹತ್ಯೆ ಮಾಡಿಕೊಂಡ ಮಹದೇವ ಸ್ವಾಮಿ ಎಪಿಎಂಸಿಯಲ್ಲಿ ತರಕಾರಿ ಮಾರಾಟದ ದಲ್ಲಾಳಿ ಕೆಲಸ ಮಾಡಿಕೊಂಡಿದ್ದರು. ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಂತ ಚಿಕ್ಕ ಮಳಿಗೆ ಹೊಂದಿದ್ದರು. ಇತ್ತೀಚೆಗೆ ಇದನ್ನು ಮಾರಾಟ ಮಾಡಲು ನಿರ್ಧರಿಸಿ ಮಾರುಕಟ್ಟೆಯಲ್ಲಿಯೇ ವ್ಯವಹಾರ ಮಾಡಿಕೊಂಡಿದ್ದ ವ್ಯಕ್ತಿಗಳಿಗೆ ಮಾರಾಟದ ಒಪ್ಪಂದ ಪತ್ರವನ್ನು ಮಾಡಿ, ಮಹದೇವ ಸ್ವಾಮಿ ಸ್ವಲ್ಪ ಹಣ ಮುಂಗಡವಾಗಿ ಪಡೆದುಕೊಂಡಿದ್ದರು. ಕೊನೆಗೆ ಒಪ್ಪಂದ ಪತ್ರವನ್ನು ರದ್ದುಗೊಳಿಸಲು ಕೇಳಿಕೊಂಡಿದ್ದರು. ಆದರೆ ಮಾರಾಟ ಒಪ್ಪಂದ ಮಾಡಿಕೊಂಡಿದ್ದ ಸಂದರ್ಭದಲ್ಲಿ ಮುಂಗಡ ಹಣ ಪಡೆದಿದ್ದ ಹಣವನ್ನು ಖರ್ಚು ಮಾಡಿಕೊಂಡಿದ್ದರು. ಇದರಿಂದ ಮುಂಗಡ ಹಣ ಕೊಡುವಂತೆ ಒಪ್ಪಂದ ಮಾಡಿಕೊಂಡವರು ಕೇಳುತ್ತಿದ್ದರು ಎನ್ನಲಾಗಿದೆ. ಇದರಿಂದ ಹೆದರಿದ ಮಹದೇವ ಸ್ವಾಮಿ ತನಗೆ ಬೆದರಿಕೆ ಹಾಕಿದ ಆರು ಜನರ ಹೆಸರನ್ನು ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಕುಟುಂಬಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

6 ಜನರ ವಿರುದ್ಧ ಪ್ರಕರಣ ದಾಖಲು: ಆರು ಜನರ ಹೆಸರನ್ನು ಡೆತ್​ನೋಟ್​ನಲ್ಲಿ ಮಹದೇವ ಸ್ವಾಮಿ ಬರೆದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೊದಲ ಆರೋಪಿ, ಐದನೇ ಆರೋಪಿ, ಆರನೇ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎರಡನೇ ಆರೋಪಿ ಹಾಗೂ ಮೂರನೇ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ.. ಮೈಸೂರಿನಲ್ಲಿ ಹೃದಯ ವಿದ್ರಾವಕ ಘಟನೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ಮಹಾದೇವಸ್ವಾಮಿ ಶವದ ಬಳಿ ದೊರೆತ ಡೆತ್ ನೋಟ್​​ನಲ್ಲಿ ಮಳಿಗೆ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಿರುಕುಳ ನೀಡಿದ ಆರು ಜನರ ಹೆಸರನ್ನು ಬರೆಯಲಾಗಿದೆ. ಅದರನ್ವಯ ಕೆ ಆರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ತಲೆಮರೆಸಿಕೊಂಡಿದ್ದು. ಅವರನ್ನು ಶೀಘ್ರವಾಗಿ ಬಂಧಿಸಲಾಗುವುದೆಂದು ನಗರ ಪೋಲಿಸ್ ಕಮಿಷನರ್ ರಮೇಶ್ ಬಾನೋತ್ ಈಟಿವಿ ಭಾರತ್​​ಗೆ ಮಾಹಿತಿ ನೀಡಿದರು.

Last Updated : Aug 31, 2023, 5:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.