ಮೈಸೂರು: ಐವರು ಸೇರಿ ಭಿಕ್ಷುಕಿಗೆ ಮದ್ಯ ಕುಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೃದಯ ಭಾಗವಾದ ಕೆ.ಟಿ. ಸ್ಟ್ರೀಟ್ ಸುತ್ತಮುತ್ತ ಓಡಾಡಿಕೊಂಡು ಭಿಕ್ಷೆ ಬೇಡಿಕೊಂಡು ರಸ್ತೆ ಬದಿಯಲ್ಲಿ ಮಲಗುತ್ತಿದ್ದಳು. ರಾತ್ರಿ ವೇಳೆ ಭಿಕ್ಷುಕಿಗೆ ಐವರು ಮದ್ಯ ಕುಡಿಸಿ ಮತ್ತು ತಾವು ಮದ್ಯ ಸೇವಿಸಿದ್ದಾರೆ. ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾರೆ.
ಮಂಗಳವಾರ ಬೆಳಗ್ಗೆ 5 ಗಂಟೆ ವೇಳೆಗೆ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಪೊಲೀಸರು ಪರಿಶೀಲನೆ ನಡೆಸಿದ್ದು, ಹತ್ತಿರದ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಫೂಟೇಜ್‌ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಲಷ್ಕರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.