ETV Bharat / state

ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ: ಸಿಎಂ ಬಿಎಸ್​​ವೈ

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿರುವ ಪ್ರಶಂಸನಾ ಕಾರ್ಯವನ್ನು ವೈಯಕ್ತಿಕವಾಗಿ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

criminal justice system cm bsy said
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Nov 24, 2020, 10:01 PM IST

ಮೈಸೂರು: ಸಾರ್ವಜನಿಕರು ಯಾವುದೇ ಭೀತಿಯಿಲ್ಲದೆ ಶಾಂತಿಯಿಂದ ನೆಲೆಸುವುದಕ್ಕೆ ಅಪರಾಧ ರಹಿತವಾದ ಉತ್ತಮ ಕಾನೂನು ಮತ್ತು ಸುವ್ಯವಸ್ಥೆ ಕಲ್ಪಿಸುವಂಥದ್ದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮಂಗಳವಾರ ಮೈಸೂರು ನಗರದ ಪೊಲೀಸ್ ಆಯುಕ್ತರ ನೂತನ ಕಚೇರಿ ಹಾಗೂ ಪೊಲೀಸ್ ಗೃಹ-2020 ಯೋಜನೆಯಡಿ ನಿರ್ಮಿಸಿರುವ 108 ವಸತಿ ಗೃಹಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ತರವಾಗಿದೆ. ಮೈಸೂರು ನಗರದ ಪೊಲೀಸರಿಂದ ಅತ್ಯಂತ ಜನಪರವಾದ, ಗುಣಾತ್ಮಕ, ವೃತ್ತಿಪರ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾದ ಕೆಲಸವನ್ನು ಸರ್ಕಾರ ನಿರೀಕ್ಷಿಸುತ್ತಿದೆ ಎಂದರು.

criminal justice system cm bsy said
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು ನಗರ ಪೊಲೀಸರ ಕಾರ್ಯಕ್ಷಮತೆಯನ್ನು ವೃದ್ಧಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಪೊಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸುಸಜ್ಜಿತ ಹಾಗೂ ಮೂಲಭೂತ ಸೌಕರ್ಯದಿಂದ ಕೂಡಿದ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

criminal justice system cm bsy said
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಗಮದ ಮೂಲಕ ನೂತನವಾದ ಆಧುನಿಕ ವಿನ್ಯಾಸದ ವಸತಿ ಗೃಹ ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತಿದೆ. ಮೈಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜ್ಯೋತಿ ನಗರದಲ್ಲಿ 36 ಹಾಗೂ ಜಾಕಿ ಕ್ವಾಟ್ರಸ್‍ನ 72 ವಸತಿ ಗೃಹಗಳು ಎಲ್ಲಾ ಮೂಲಭೂತ ಸೌಕರ್ಯದಿಂದ ಕೂಡಿವೆ. ಪೊಲೀಸ್ ಗೃಹ 2020 ಯೋಜನೆಯಡಿ ಈ ವಸತಿ ಸಮುಚ್ಚಯ ನಿರ್ಮಾಣಕ್ಕೆ 20.31 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ಪೊಲೀಸ್ ಗೃಹ-2025ನೇ ಯೋಜನೆಯಡಿ 184 ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಪ್ರಸ್ತುತ ಕಾಲದಲ್ಲಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಪೊಲೀಸ್ ವಸತಿ ಗೃಹಗಳಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಸರ್ಕಾರ ಮನಗಂಡು ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿರುವ ಪ್ರಶಂಸನಾ ಕಾರ್ಯವನ್ನು ವೈಯಕ್ತಿಕವಾಗಿ ಅಭಿನಂದಿಸುತ್ತೇನೆ. ಕೊರೊನಾ ಸೋಂಕಿನ ಹರಡುವಿಕೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಲ್ಲಿ ಹಾಗೂ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಮೈಸೂರು ನಗರ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ನಿವಾಸಕ್ಕೆ ಸಚಿವಾಕಾಂಕ್ಷಿಗಳ ಭೇಟಿ ; ಕುತೂಹಲದ ಕೇಂದ್ರವಾದ ಸಾಹುಕಾರ್ ನಿವಾಸ!!

ಕೋವಿಡ್ ಹಿನ್ನೆಲೆಯಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಚರ್ಚಿಸಿದ್ದಾರೆ. ಇನ್ನೂ ನಾಲ್ಕೈದು ವಾರಗಳ ಕಾಲ ಕಟ್ಟೆಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದರು.

ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲಿ ಅತ್ಯಂತ ದಕ್ಷತೆ ಹಾಗೂ ನಿಷ್ಠೆಗೆ ಹೆಸರುವಾಸಿಯಾಗಿದೆ. ಅದರಂತೆ ಮೈಸೂರಿನಲ್ಲಿ ಇಲಾಖೆಯು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು. ಮೈಸೂರಿನ ಪೊಲೀಸ್ ಇಲಾಖೆಯು ಕೋವಿಡ್-19 ಹಿನ್ನೆಲೆ ಜಾರಿಯಾದ ಲಾಕ್‍ಡೌನ್ ಸಂದರ್ಭದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದೆ. ಅದರಂತೆ ಜಿಲ್ಲೆಯ ಜನರ ಸಹಕಾರವು ಉತ್ತಮವಾಗಿದೆ. ಇದರಿಂದಾಗಿ ಸಾಂಸ್ಕೃತಿಕ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಅಭಿವೃದ್ಧಿ ನಿರಂತರವಾಗಿ ನಡೆಯುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.