ಮೈಸೂರು: ಸಂಭಾವ್ಯ ಕೊರೊನಾ 3ನೇ ಅಲೆಯನ್ನು ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವ ದೃಷ್ಟಿಯಿಂದ 7500 ವೈದ್ಯಕೀಯ ಸಿಬ್ಬಂದಿಯನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಸರಗೂರು ತಾಲೂಕಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಇದರ ಬಗ್ಗೆ ತಜ್ಞರ ಜೊತೆ ಚರ್ಚಿಸಿ ಸಲಹೆ ಪಡೆಯಲಾಗುವುದು. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಎನ್ಇಪಿಯಿಂದ ಭಾಷೆಗೆ ಧಕ್ಕೆ ಇಲ್ಲ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ಯಾವುದೇ ಧಕ್ಕೆ ಇಲ್ಲ. ಲಕ್ಷಾಂತರ ಮಂದಿ ಹಾಗೂ ತಜ್ಞರೊಂದಿಗೆ ಚರ್ಚಿಸಿ ಪ್ರಧಾನಿ ಮೋದಿ ಈ ನೀತಿ ಜಾರಿಗೆ ತಂದಿದ್ದಾರೆ. ಎನ್ಇಪಿ ಶಿಕ್ಷಣ ನೀತಿಯಲ್ಲಿ ನಾಲ್ಕು ಶಿಕ್ಷಣ ಅವಧಿಯಲ್ಲಿ ನಾಲ್ಕನೇ ವರ್ಷ ಓದುವುದು ವಿದ್ಯಾರ್ಥಿಗಳಿಗೆ ಬಿಟ್ಟ ವಿಚಾರ, ಇದರಲ್ಲಿ ಯಾವುದೇ ಒತ್ತಡ ಇಲ್ಲ ಎಂದು ತಿಳಿಸಿದರು.
ಓದಿ: ದಾವಣಗೆರೆ ಜುಲೈ 5ರವರೆಗೆ ಲಾಕ್‍ಡೌನ್: ಅಗತ್ಯ ವಸ್ತುಗಳ ಮಾರಾಟ, ಖರೀದಿಗೆ ಸಮಯ ನಿಗದಿ