ETV Bharat / state

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪತಿ ಮುರ್ಮು ಸ್ವಾಗತಿಸಿದ ರಾಜ್ಯಪಾಲರು - ಮೈಸೂರು ವಿಮಾನ ನಿಲ್ದಾಣ

ತಮಿಳುನಾಡಿನ ಮಧುಮಲೈಗೆ ತೆರಳುವ ಹಿನ್ನೆಲೆ ದ್ರೌಪದಿ ಮುರ್ಮು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

The Governor welcomed the President at the Mysore Airport
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಯನ್ನು ಸ್ವಾಗತಿಸಿದ ರಾಜ್ಯಪಾಲರು
author img

By

Published : Aug 5, 2023, 7:11 PM IST

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮಿಳುನಾಡಿನ ಮಧುಮಲೈಗೆ ತೆರಳುವ ಹಿನ್ನೆಲೆಯಲ್ಲಿ ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪಾಲಿಕೆ ಮೇಯರ್ ಶಿವಕುಮಾರ್​, ಪ್ರಾದೇಶಿಕ ಆಯುಕ್ತರಾದ ಪ್ರಕಾಶ್, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್ ಈ ವೇಳೆ ಇದ್ದರು.

ಎರಡನೇ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ: ಕಳೆದ ವರ್ಷ ದಸರಾ ಉದ್ಘಾಟನೆ ಮಾಡಲು ಆಗಮಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಬಾರಿ ಮಧುಮಲೈ ಜಿಲ್ಲೆಯ ಕಾರ್ಯಕ್ರಮಕ್ಕೆ ತೆರಳಲು ಮೈಸೂರಿಗೆ ಬಂದಿದ್ದರು. ರಾಷ್ಟ್ರಪತಿ ಅವರು ಮೈಸೂರಿಗೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು, ನಾನಾ ಇಲಾಖೆಗಳ ಅಧಿಕಾರಿಗಳಿಗೆ ರಾಷ್ಟ್ರಪತಿ ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಸೂಚನೆ ಕೊಟ್ಟಿದ್ದರು.

ಕೊಠಡಿಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್​ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡಬೇಕು ಎಂದರು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆಂಬ್ಯುಲೆನ್ಸ್​ಗಳನ್ನು ನಿಯೋಜಿಸಬೇಕು. ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದ್ದರು. ರಾಷ್ಟ್ರಪತಿಗಳು ಬಂದು ಹೋಗುವವರೆಗೂ, ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿತ್ತು.

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ರಾಜ್ಯಪಾಲರ ಭೇಟಿ: ರಾಜ್ಯಪಾಲರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಬಳಿಕ ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಶ್ರೀಗಳನ್ನು ಭೇಟಿಯಾಗಿದ್ದಾರೆ. ಅವರಿಂದ ಆಶೀರ್ವಾದ ಪಡೆದು ನಂತರ ಆಶ್ರಮದಲ್ಲೇ ಇರುವ ಶುಕವನಕ್ಕೆ ತೆರಳಿ ವೀಕ್ಷಿಸಿ, ಅಲ್ಲಿದ್ದ ಪಕ್ಷಿಗಳಿಗೆ ಆಹಾರ ನೀಡಿದ್ದಾರೆ.

ಇದನ್ನೂ ಓದಿ: ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಶಾಂತಿ ಮರುಸ್ಥಾಪನೆಗೆ ಕ್ರಮ ಕೈಗೊಳ್ಳಲಿ: ರಾಷ್ಟ್ರಪತಿ ಭೇಟಿಯಾದ ಖರ್ಗೆ ನಿಯೋಗದ ಒತ್ತಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.