ETV Bharat / state

ಅಧಿಕಾರಿಗಳ ಸಾಮಾಜಿಕ ಜಾಲತಾಣ ನಿಷೇಧಿಸಿ: ಸಾ.ರಾ.ಮಹೇಶ್ ಒತ್ತಾಯ

ಅಧಿಕಾರಿಗಳ ಸಾಮಾಜಿಕ ಜಾಲತಾಣ ನಿಷೇಧಿಸುವಂತೆ ಶಾಸಕ ಸಾ.ರಾ.ಮಹೇಶ್ ಒತ್ತಾಯಿಸಿದ್ದಾರೆ.

Sa ra Mahesh
ಸಾ.ರಾ.ಮಹೇಶ್
author img

By

Published : Aug 28, 2021, 6:45 PM IST

ಮೈಸೂರು: ಅಧಿಕಾರಿಗಳ ಸಾಮಾಜಿಕ ಜಾಲತಾಣ ನಿಷೇಧಿಸುವಂತೆ ಸಂಸದ ಪ್ರತಾಪ್​​​ ಸಿಂಹ ಮುಖ್ಯಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಕ್ಕೆ ಶಾಸಕ ಸಾ.ರಾ.ಮಹೇಶ್ ಸಹಮತ ಸೂಚಿಸಿದ್ದಾರೆ.

ಶಾಸಕ ಸಾ.ರಾ.ಮಹೇಶ್ ಸುದ್ದಿಗೋಷ್ಠಿ

ನಗರದ ರಮಾವಿಲಾಸ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಸಂಬಳ ತೆಗೆದುಕೊಳ್ಳುವವರು ಸರ್ಕಾರದ ಸೇವೆ ಮಾಡಲಿ. ಅವರಿಗೆ ಯಾಕೆ ಪ್ರಚಾರ, ಅಧಿಕಾರಿಗಳ ಸಾಮಾಜಿಕ ಜಾಲತಾಣ ನಿಷೇಧಿಸುವಂತೆ ಕೇಂದ್ರದ ವಾರ್ತಾ ಹಾಗೂ ಪ್ರಸಾರ ಇಲಾಖೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದರು.

ಮೂರನೇ ಅವಧಿಯ ಮೇಯರ್ ಆಯ್ಕೆ ಸಮಯದಲ್ಲಿಯೇ ಕಾಂಗ್ರೆಸ್ ಜೊತೆಗಿನ ಮೈತ್ರಿ ಕಡಿದುಕೊಳ್ಳಲು ಜೆಡಿಎಸ್ ಮುಂದಾಗಿತ್ತು. ಆ ವೇಳೆ ಏಕಾಂಗಿಯಾಗಿ ಜೆಡಿಎಸ್​​ಗೆ ಮೇಯರ್ ಸ್ಥಾನ ಸಿಗುವ ವಿಶ್ವಾಸವಿತ್ತು. ಈ ಸಂಬಂಧ ನಾವು ತಂತ್ರಗಾರಿಕೆ ರೂಪಿಸಿದ್ದೆವು ಎಂದರು.

ಕಾಂಗ್ರೆಸ್​ ವಿರುದ್ಧ ಗುಡುಗಿದ ಮಹೇಶ್​:

ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ರದ್ಧಾದ ನಂತರ ನಡೆದ ಮೇಯರ್ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಸಕರಾತ್ಮಕವಾಗಿ ಸ್ಪಂದಿಸಲಿಲ್ಲ. ನಮ್ಮ ಪಕ್ಷದ ಸದಸ್ಯರನ್ನೆ ನಮ್ಮ ವಿರುದ್ಧ ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡಿತು. ಇಷ್ಟಾದರೂ ಶಾಂತಕುಮಾರಿ ಮೇಯರ್ ಆಗಲೆಂಬ ಕಾರಣಕ್ಕಾಗಿ ಕಾಂಗ್ರೆಸ್​ಗೆ ಬೆಂಬಲ ನೀಡಲು ಜೆಡಿಎಸ್ ನಿರ್ಧರಿಸಿತ್ತು. ಆದರೆ ಕಾಂಗ್ರೆಸ್​ನ ಯಾವೊಬ್ಬ ಹಿರಿಯ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಎಂದು ಆ ಪಕ್ಷದ ನಾಯಕರು ಕೇಳಲಿಲ್ಲ. ಹಾಗಾಗಿ ನಾವು ಸ್ವತಂತ್ರವಾಗಿ ಸ್ಪರ್ಧಿಸಿದೆವು. ಕಾಂಗ್ರೆಸ್ ನಾಯಕರ ಹಠಮಾರಿ ಧೋರಣೆಯಿಂದ 35 ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಮೇಯರ್ ಸ್ಥಾನ ಸಿಕ್ಕಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವೆ ಕಾರಣ ಎಂದರು.

ಗ್ಯಾಂಗ್ ರೇಪ್ ವಿಚಾರ:

ಸಾಮೂಹಿಕ ಅತ್ಯಾಚಾರ ಪ್ರಕರಣ ಮೈಸೂರು ತಲೆತಗ್ಗಿಸುವ ವಿಚಾರವಾಗಿದೆ. ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆಂಬ ಮಾಹಿತಿ ಬಂದಿದೆ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ಇಂತವರನ್ನು ಎನ್‌ಕೌಂಟರ್ ಮಾಡಲು ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಹೇಳಿದರು.

ಬಳಿಕ ಜೆಡಿಎಸ್ ನಗರಾಧ್ಯಕ್ಷ ಕೆ‌.ಟಿ.ಚೆಲುವೇಗೌಡ ಮಾತನಾಡಿ, ಇತ್ತೀಚೆಗೆ ನಡೆದ ಮೇಯರ್ ಚುನಾವಣೆಯಲ್ಲೂ ಕಾಂಗ್ರೆಸ್ ಜೊತೆಗಿನ ಮೈತ್ರಿ ಬೇಡವೆಂದು ಪಕ್ಷದ ವರಿಷ್ಠರು ಸೂಚನೆ ನೀಡಿದ್ದರು. ಪಕ್ಷದ ಅಣತಿಯಂತೆ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡಿದೆವು ಎಂದರು.

ಓದಿ: Road Accident: ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.