ಮೈಸೂರು: ಕೊರೊನಾ ಸೋಂಕಿಗೆ ತುತ್ತಾಗಿ ಗ್ರಾಪಂ ಸದಸ್ಯೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ಜಯಪುರ ಹೋಬಳಿಯ ಸೋಲಿಗರ ಕಾಲೋನಿಯಲ್ಲಿ ನಡೆದಿದೆ.
ಎಂ. ಲಕ್ಷ್ಮಿ (38) ಕೊರೊನಾಗೆ ಬಲಿಯಾದ ಗ್ರಾಪಂ ಸದಸ್ಯೆ. ಸೋಲಿಗರ ಕಾಲೋನಿ ಗ್ರಾಪಂ ಸದಸ್ಯೆಯಾಗಿದ್ದ ಲಕ್ಷ್ಮಿ ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ತೀವ್ರ ಉಸಿರಾಟದ ಸಮಸ್ಯೆಯಿಂದ ಇಂದು ಕೊನೆಯುಸಿರೆಳೆದಿದ್ದಾರೆ.
ಸೋಲಿಗರ ಕಾಲೋನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇರುವುದರಿಂದ ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.