ಮೈಸೂರು: ಇಂದು ಮೈಸೂರು-ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿರುವ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಂಜನಗೂಡು ತಾಲೂಕಿನ ಸುತ್ತೂರಿನ ಶ್ರೀಕ್ಷೇತ್ರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುತ್ತೂರು ಮಠದ ಪೀಠಾಧಿಪತಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲು ತೆರಳಿದ ವೇಳೆ ಪೂರ್ಣಕುಂಭದೊಂದಿಗೆ ಸ್ವಾಗತ ಕೋರಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವರಾದ ಡಾ. ಸುಧಾಕರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಮುರುಗೇಶ್ ನಿರಾಣಿ, ವಿ.ಸೋಮಣ್ಣ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಹರ್ಷವರ್ಧನ್ ಸೇರಿದಂತೆ ರಾಜಕೀಯ ಗಣ್ಯರು ಸುತ್ತೂರಿನಲ್ಲಿ ಹಾಜರಿದ್ದರು.
ಓದಿ: SSLC ಫಲಿತಾಂಶ ಪ್ರಕಟ: ಬೇರೆಯವರಿಂದ ಪರೀಕ್ಷೆ ಬರೆಸಿದ್ದ ವಿದ್ಯಾರ್ಥಿನಿ ಡಿಬಾರ್, ಉಳಿದವರೆಲ್ಲರೂ ಪಾಸ್
ಕೊರೊನಾ ರೂಲ್ಸ್ ಮರೆತರು:
ಮುಖ್ಯಮಂತ್ರಿ ಬಂದೊಡನೆ ಸ್ವಾಗತ ಕೋರಲು ರಾಜಕೀಯ ಗಣ್ಯರು ಹಾಗೂ ಕಾರ್ಯಕರ್ತರು ಮುಗಿಬಿದ್ದು ಕೊರೊನಾ ರೂಲ್ಸ್ ಬ್ರೇಕ್ ಮಾಡಿದರು.