ಮೈಸೂರು : ಮೈಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಪಿರಿಯಾಪಟ್ಟಣ ಶಾಸಕ ಪುತ್ರನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡುವ ಮೂಲಕ ಜಿ ಟಿ ದೇವೇಗೌಡ ಪುನಾ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಇಂದು ಮೈಮುಲ್ ಮೆಗಾ ಡೈರಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿರಿಯಾಪಟ್ಟಣ ಶಾಸಕ ಮಹದೇವ್ ಅವರ ಪುತ್ರ ಪ್ರಸನ್ನ ಅವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಜಿ ಟಿ ದೇವೇಗೌಡ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.
ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇವರ ವಿರೋಧವಾಗಿ ಪ್ರಚಾರ ಮಾಡಿದ್ದರೂ, ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಈಗ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಮಹದೇವ್ ಅವರ ಮಗನನ್ನು ಮೆಗಾ ಡೈರಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿಗೆ ಪರೋಕ್ಷ ಟಕ್ಕರ್ ಕೊಟ್ಟ ಜಿಟಿಡಿ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಜಿ ಟಿ ದೇವೆಗೌಡ, ಎಲ್ಲರೂ ಒಗ್ಗಟ್ಟಾಗಿ ಅವಿರೋಧವಾಗಿ ಅಧ್ಯಕ್ಷರನ್ನು ಅಯ್ಕೆ ಮಾಡಲಾಗಿದೆ. ಆಯ್ಕೆಯಾದ ಎಲ್ಲರೂ ಹೆಚ್ ಡಿ ಕುಮಾರಸ್ವಾಮಿ ಹೇಳಿದಂತೆ ಡೈರಿಯಲ್ಲಿ ಯಾವುದೇ ಅಕ್ರಮ ಅವ್ಯವಹಾರ ಮಾಡದೇ ಡೈರಿ ಅಭಿವೃದ್ಧಿಗೆ ಶ್ರಮಿಸಲು ಕರೆ ನೀಡಿದರು.
ಸಿಡಿ ಪ್ರಕರಣದಿಂದ ಕರ್ನಾಟಕ ದೇಶದಲ್ಲಿ ತಲೆ ತಗ್ಗಿಸುವಂತಾಗಿದೆ. ಈ ವಿಚಾರವನ್ನು ಮಾಧ್ಯಮಗಳಲ್ಲಿ ಹೆಚ್ಚಾಗಿ ತೋರಿಸಬಾರದು ಎಂದು ಮನವಿ ಮಾಡುತ್ತೇನೆ. ಸಿಡಿ ಪ್ರಕರಣದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.