ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇವತ್ತು ನೂತನ ಆಯುಕ್ತರು ಅಧಿಕಾರವಹಿಸಿಕೊಂಡಿದ್ದಾರೆ. ಪ್ರಭಾರ ಆಯುಕ್ತರಾಗಿದ್ದ ಕಾಂತರಾಜು ಅವರು ನೂತನ ಆಯುಕ್ತರಾದ ಗುರುದತ್ತ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇಷ್ಟು ದಿನ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆ ಖಾಲಿಯಿತ್ತು.
ಅಧಿಕಾರವಹಿಸಿಕೊಂಡ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಆಯುಕ್ತ ಗುರುದತ್ತ ಹೆಗ್ಡೆ ಅವರು, ನಾನು ದಸರಾ ಆರಂಭವಾಗುವ ಮೊದಲು ಬಂದಿದ್ದೇನೆ. ಇಲ್ಲಿನ ಕಲೆ, ಸಂಸ್ಕೃತಿಯ ಬಗ್ಗೆ ಅಪಾರ ಗೌರವವಿದೆ. ಅದನ್ನು ಉಳಿಸಿಕೊಂಡು ಹೋಗುತ್ತೇನೆ. ಈ ಬಾರಿ ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಅದರ ನಡುವೆಯೂ ದಸರಾವನ್ನು ಉತ್ತಮ ರೀತಿಯಲ್ಲಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಮೇಯರ್ ಪುಷ್ಪಲತಾ ಜಗನ್ನಾಥ್ ನೂತನ ಆಯುಕ್ತರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.