ETV Bharat / state

ಮನುವಾದಿ ಮನಸ್ಸಿನವರಿಂದ ಕಾಂಗ್ರೆಸ್ ನ ಶಕ್ತಿ ಯೋಜನೆ ವ್ಯಂಗ್ಯ : ಸಚಿವ ಎಚ್ ಸಿ ಮಹಾದೇವಪ್ಪ

ಮಹಿಳೆಯರ ಉಚಿತ ಪ್ರಯಾಣಕ್ಕೆ ವಾರ್ಷಿಕವಾಗಿ 4 ಸಾವಿರದ 50 ಕೋಟಿ ಖರ್ಚಾಗುತ್ತೆ ಎಂದು ಸಚಿವ ಎಚ್ ಸಿ.ಮಹಾದೇವಪ್ಪ ಹೇಳಿದರು.

Etv Bharath-c-mahadevappa-reaction-on-shakti-yojana-scheme
H C Mahadevappa reaction: ಶಕ್ತಿ ಯೋಜನೆಯನ್ನು ಮನುವಾದಿಯ ಮನಸ್ಸಿನವರು ವ್ಯಂಗ್ಯ ಮಾಡುತ್ತಿದ್ದಾರೆ - ಸಚಿವ ಎಚ್ ಸಿ.ಮಹಾದೇವಪ್ಪ
author img

By

Published : Jun 12, 2023, 7:12 PM IST

ಸಚಿವ ಎಚ್ ಸಿ. ಮಹಾದೇವಪ್ಪ

ಮೈಸೂರು: ರಾಜ್ಯದ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಶಕ್ತಿ ಯೋಜನೆ ಕುರಿತು ವ್ಯಂಗ್ಯವಾಡುತ್ತಿರುವವರಿಗೆ ಸಚಿವ ಡಾ. ಎಚ್ ಸಿ. ಮಹಾದೇವಪ್ಪ ತಿರುಗೇಟು ಕೊಟ್ಟಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯಾದ್ಯಂತ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ ಮಹಿಳೆಯರಿಗೆ ಉಚಿತ ಬಸ್​ ಸೇವೆಯನ್ನು ಒದಗಿಸಿದೆ ಎಂದರು.

ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಯೋಜನೆಯನ್ನು ವ್ಯಂಗ್ಯ ಮಾಡುತ್ತಿರುವವರು, ದೇಶದಲ್ಲಿ ಹಿಂದೂ ಕೋಡ್ ಬಿಲ್ ಬಂದಾಗ ಮಹಿಳೆಯರ ಸಬಲೀಕರಣ, ಮಹಿಳೆಯರಿಗೆ ಸಮಾನ ಅವಕಾಶ, ಸಮಾನ ವೇತನ, ಪುರುಷರಿಗೆ ಸಮಾನವಾದ ಸ್ಥಾನಮಾನ ಕೊಡಬೇಕು ಎಂದಾಗ ಯಾವ ಮನುವಾದಿಗಳು ವಿರೋಧ ಮಾಡಿದ್ದರೋ, ಅದೇ ಮನಸ್ಸಿನವರು ವ್ಯಂಗ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿರುವ ಬಗ್ಗೆ ಮಾತನಾಡಿ, ಸದ್ಯ ಕುಡಿಯುವ ನೀರಿನ ಅಭಾವ ಇಲ್ಲ, ಮುಖ್ಯಮಂತ್ರಿಗಳು ಮೊನ್ನೆ ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳಿಗೆ ಕೊಟ್ಟಿದ್ದಾರೆ. ನಾನು ಪರಿಶೀಲನೆ ನಡೆಸಿ ಏನು ಮಾಡಬೇಕೆಂದು ಹೇಳುತ್ತೇನೆ. ಇನ್ನು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಂದಿಲ್ಲವೆಂದು ಆಡ್ಮಿಷನ್​ಅನ್ನು ನಿರಾಕರಿಸಬಾರದು, ಇದನ್ನೆಲ್ಲ ಸರಿಪಡಿಸಿ ಸರಿಯಾಗಿ ವಿದ್ಯಾರ್ಥಿ ವೇತನ ಬರುವ ಹಾಗೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.

ಶಕ್ತಿ ಯೋಜನೆಯಿಂದ ಟ್ಯಾಕ್ಸಿ ಮತ್ತು ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಶಕ್ತಿ ಯೋಜನೆಯನ್ನು ಟ್ಯಾಕ್ಸಿ ಮತ್ತು ಆಟೋ ಚಾಲಕರನ್ನು ಗಮದಲ್ಲಿಟ್ಟುಕೊಂಡು ಮಾಡಿದ್ದಲ್ಲ. ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಬೇಕು ಎಂದು ಮಾಡಿದ್ದೇವೆ ಎಂದರು.

ಶಕ್ತಿ ಯೋಜನೆ ಇಡೀ ರಾಷ್ಟ್ರದಲ್ಲಿಯೇ ಹೊಸ ಯೋಜನೆ, ಇದು ಮಹಿಳಾ ಸಮುದಾಯದಲ್ಲಿ ಸಂಚಲ ಉಂಟುಮಾಡಿದೆ. ಸುಮಾರು ರಾಜ್ಯಾದ್ಯಂತ 40 ಲಕ್ಷ ಮುಕ್ತವಾಗಿ ಪ್ರವಾಸ, 11 ಲಕ್ಷ ಪಾಸ್​ ಅವರಿಗೆ ಒಟ್ಟು 51ಲಕ್ಷ ಪ್ರಯಾಣಿಕರು ವಾರ್ಷಿಕವಾಗಿ ರಾಜ್ಯದ ಒಳಗಡೆ ಪ್ರವಾಸ ಮಾಡುತ್ತಾರೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ವಾರ್ಷಿಕವಾಗಿ 4 ಸಾವಿರದ 50 ಕೋಟಿ ರೂಪಾಯಿ ಖರ್ಚಾಗುತ್ತೆ. ಬೆಂಗಳೂರಿನಲ್ಲಿ ಗ್ರೂಪ್​ ಡಿ ಮಹಿಳಾ ನೌಕರರರೊಬ್ಬರ ಅಭಿಪ್ರಾಯವನ್ನು ನನ್ನ ಸ್ನೇಹಿತರೊಬ್ಬರು ಕಳುಹಿಸಿ ಕೊಟ್ಟರು. ನನಗೆ ತಿಂಗಳಿಗೆ ಒಂದು ಸಾವಿರ ರೂಪಾಯಿ ಬಸ್​ನಲ್ಲಿ ಪ್ರಯಾಣಿಸಲು ಖರ್ಚಾಗುತ್ತಿತ್ತು. ಈಗ ಆ ಹಣ ಉಳಿತಯವಾಗಿರುವುದರಿಂದ ಅನುಕೂಲವಾಗಿದೆ ಎಂದು ಮಹಿಳೆಯೊಬ್ಬರು ಅಭಿಪ್ರಾಯ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

ನಿನ್ನೆ ಪ್ರಾರಂಭವಾದ ಮಹಿಳೆಯರಿಗೆ ಉಚಿತ ಬಸ್ ಸಂಚಾರ ಯೋಜನೆ ಯಶಸ್ವಿಯಾಗಿದ್ದು. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಮಹಿಳೆಯರು ಸಂತೋಷದಿಂದ ಸಂಚಾರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಜೂನ್ 23ರಿಂದ ಆರಂಭವಾಗುವ ಆಷಾಢ ಶುಕ್ರವಾರ ಸಿದ್ಧತೆ ಕೈಗೊಳ್ಳಿ - ಡಾ ಹೆಚ್.ಸಿ. ಮಹದೇವಪ್ಪ: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸಲು ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಅವರು, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು. ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ, ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟ ಚಾಮುಂಡೇಶ್ವರಿ ದೇವಸ್ಧಾನದಲ್ಲಿ 2023ನೇ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಅಂಗವಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು. ಈ ಹಿಂದೆ ನಡೆದಿರುವ ಕ್ರಮಗಳನ್ನ ಅನುಸರಿಸಿ, ಯಾವುದು ಲೋಪವಿದಿಯೋ ಅಂತಹ ವ್ಯವಸ್ಥೆಗಳನ್ನ ಬಿಟ್ಟು ಜನರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಸಭೆಯಲ್ಲಿ ಎನ್.ಆರ್ ಕ್ಷೇತದ ಶಾಸಕರಾದ ತನ್ವಿರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ ಉಪಸ್ಥಿತರಿದ್ದರು.

ಇದನ್ನೂ ಓದಿ:ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ ಕುರಿತು ಸಿಎಂ, ಡಿಸಿಎಂ ಜೊತೆ ಚರ್ಚೆ: ಕೃಷಿ ಸಚಿವ ಚೆಲುವರಾಯಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.