ಮೈಸೂರು: ಕುವೆಂಪು ನಗರದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರ ಸಂಬಂಧಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕಾರ್ತಿಕ್ (21) ಮೃತ ಯುವಕ. ಈತ ಹೆಚ್ ವಿಶ್ವನಾಥ್ ಅವರ ತಂಗಿಯ ಮೊಮ್ಮಗ. ಕಳೆದ ವಾರ ನಗರದ ಕುವೆಂಪುನಗರದ ರಸ್ತೆಯೊಂದರ ಬಳಿ ಬೈಕ್ ನಲ್ಲಿ ಹೋಗುವಾಗ ನಿಯಂತ್ರಣ ಸಿಗದೆ ಆಯತಪ್ಪಿ ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಭಾನುವಾರ ಮೃತಪಟ್ಟಿದ್ದಾರೆ.
ಈ ಸಂಬಂಧ ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.