ಮೈಸೂರು: ಕೋವಿಡ್ -19 ನಿಯಂತ್ರಣದ ಕಾರ್ಯಚರಣೆಗೆ ಜಿಲ್ಲೆಯ ವಿಶೇಷ ಅಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ನಿಯೋಜನೆ ಮಾಡಲಾಗಿದೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣ ಕಾರ್ಯಾಚರಣೆ ವಿಶೇಷ ಅಧಿಕಾರಿಯಾಗಿ ಹರ್ಷ ಗುಪ್ತ ಅವರನ್ನು ಸರ್ಕಾರ ನಿಯೋಜಿಸಿದೆ.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ಜತೆ ಹರ್ಷಗುಪ್ತ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಗುರುದತ್ ಹೆಗ್ಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಜುಬಿಲಂಟ್ ಕಾರ್ಖಾನೆಯ ಬಗ್ಗೆ ಹಾಗೂ ಜಿಲ್ಲೆಯ ಇತರ ತಾಲೂಕು ಕೇಂದ್ರಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.