ETV Bharat / state

ಮಾತನಾಡುವುದು ಸುಲಭ, ಜೀರ್ಣಿಸಿಕೊಳ್ಳುವುದು ಕಷ್ಟ : ಹೆಚ್ ಡಿ ದೇವೇಗೌಡ - ಈಟಿವಿ ಭಾರತ್ ಕನ್ನಡ ಸುದ್ದಿ

ಚುನಾವಣಾ ಪ್ರಚಾರದ ಕಾವು ಏರತೊಡಗಿದೆ. ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ಕೂಡ ಮತಬೇಟೆಗೆ ಇಳಿಯುವುದಾಗಿ ಘೋಷಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು
ಮಾಜಿ ಪ್ರಧಾನಿ ದೇವೇಗೌಡರು
author img

By

Published : Apr 25, 2023, 6:20 PM IST

ಮಾಜಿ ಪ್ರಧಾನಿ ದೇವೇಗೌಡರ ಪ್ರತಿಕ್ರಿಯೆ

ಮೈಸೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ರಾಜ್ಯ ರಾಜಕೀಯದ ದಣಿವರಿಯದ ನಾಯಕ ಹೆಚ್​ ಡಿ ದೇವೇಗೌಡರು ಸಹ ಮತಬೇಟೆ ನಡೆಸಲು ಸನ್ನದ್ಧರಾಗಿದ್ದಾರೆ. ಮಾತನಾಡಲು ಯಾರ ಲೈಸೆನ್ಸ್ ಬೇಕಿಲ್ಲ, ಪ್ರತಿಯೊಬ್ಬರಿಗೂ ಮಾತನಾಡುವ ಸ್ವಾತಂತ್ರ್ಯ ಇದೆ. ಅವರು ಮಾತನಾಡಿಕೊಳ್ಳಲಿ. ಯಾರೇ ಆಗಲಿ ಮನುಷ್ಯರ ಬಗ್ಗೆ ಮಾತನಾಡುವುದು ಸುಲಭ, ಜೀರ್ಣಿಸಿಕೊಳ್ಳುವುದು ಕಷ್ಟ ಎಂದು ಸಂಸದೆ ಸುಮಲತಾ ಅಂಬರೀಶ್​ ಟೀಕೆಗೆ ಮಾಜಿ ಪ್ರಧಾನಿ ದೇವೇಗೌಡರು ತೀಕ್ಷ್ಣವಾಗಿ ಸುಮಲತಾ ಹೆಸರು ಹೇಳದೇ ಅವರ ಮಾತಿಗೆ ತಿರುಗೇಟು ನೀಡಿದರು.

ಇಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ವೇಳೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮೊದಲ ಬಾರಿಗೆ ಮಂಡ್ಯ ಸಂಸದೆ ಸುಮಲತಾ ಅವರು ಹೇಳಿದ ಸ್ವಾಭಿಮಾನ ಇದ್ದವರು ಜೆಡಿಎಸ್​ನಲ್ಲಿ ಇರಲು ಸಾಧ್ಯವಿಲ್ಲ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ರು. ಈ ಮಾತನ್ನು ಹೇಳಲು ಯಾರು ಅಪ್ಪಣೆ ಕೊಡಿಸಿದರು. ಮಾತನಾಡಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ಇರುತ್ತದೆ. ಅವರು ಮಾತನಾಡಿಕೊಳ್ಳಲಿ. ಆದರೆ ಮಾತನಾಡಿದ್ದನ್ನು ಜೀರ್ಣಿಸಿಕೊಳ್ಳುವುದು ತುಂಬಾ ಕಷ್ಟ ಎಂದು ಮಾರ್ಮಿಕವಾಗಿ ದೇವೇಗೌಡರು ಸಂಸದೆ ಸುಮಲತಾ ಅವರಿಗೆ ಟಾಂಗ್​ ಕೊಟ್ಟರು.

ಒಟ್ಟು 42 ಕಡೆ ಪ್ರಚಾರ ಮಾಡುತ್ತೇನೆ : ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಮಂಡ್ಯ ಭಿನ್ನಮತದ ಶಮನಕ್ಕೆ ಪಕ್ಷದ ಮುಖಂಡರು ಪ್ರಯತ್ನ ಮಾಡುತ್ತಿದ್ದಾರೆ. ಮಂಡ್ಯ ಅಭ್ಯರ್ಥಿಯ ಪರ ಪ್ರಚಾರಕ್ಕೆ ಹೋಗುತ್ತೇನೆ. ಜನರ ಬಳಿ ಆಶೀರ್ವಾದ ಮಾಡಿ ಎಂದು ಕೇಳುತ್ತೇನೆ. ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ರಾಜ್ಯ ಹಾಗೂ ದೇಶದ ಅಭಿವೃದ್ಧಿ ಸಾಧ್ಯ: ಯುಪಿ ಡಿಸಿಎಂ ಬ್ರಿಜೇಶ್ ಪಾಠಕ್

ಚುನಾವಣೆ ಮುಗಿಯುವವರೆಗೂ ಪ್ರತಿದಿನ ಮೂರು ಕಡೆ ಪ್ರಚಾರ ಮಾಡುತ್ತೇನೆ. ಒಟ್ಟು 42 ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಉತ್ತರ ಕರ್ನಾಟಕದ ರಾಯಚೂರು, ವಿಜಯಪುರ ಭಾಗಗಳಿಗೆ ನೀರು ಹರಿಸಿದ್ದೇನೆ. ಆ ಕಡೆಯೂ ಸಹ ಪ್ರಚಾರ ಮಾಡುತ್ತೇವೆ. ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆ ಪ್ರಚಾರ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದರು.

ಇದನ್ನೂ ಓದಿ : ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆಯಿಂದ ಹಿನ್ನಡೆ ಆಗಿಲ್ಲ, ಸರ್ಕಾರ ತನ್ನ ನಿರ್ಧಾರಕ್ಕೆ ಬದ್ದವಾಗಿದೆ: ಬಿಜೆಪಿ ನಾಯಕರ ಸಮರ್ಥನೆ..!

ಪೂರ್ಣ ಪ್ರಮಾಣದ ಅಧಿಕಾರ ಕೊಡಿ ಎಂದು ಜನರಲ್ಲಿ ಕೇಳಿಕೊಳ್ಳುತ್ತೇನೆ: ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರು. ಹಲವಾರು ಅಡೆತಡೆಗಳ ನಡುವೆಯೂ ಉತ್ತಮ ಕಾರ್ಯವನ್ನು ಮಾಡಿದ್ದಾರೆ. ಈ ಬಾರಿ ಅವರ ಪಂಚರತ್ನ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಪೂರ್ಣ ಪ್ರಮಾಣದ ಅಧಿಕಾರ ಕೊಡಿ ಎಂದು ಜನರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿಕೆ ನೀಡಿದ್ರು.

ಇದನ್ನೂ ಓದಿ : ಮೋದಿ, ಅಮಿತ್ ಶಾ ಗಿಂತ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ದೊಡ್ಡ ನಾಯಕರು: ಬಿ ಕೆ ಹರಿಪ್ರಸಾದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.