ಮೈಸೂರು : ಕೊರೊನಾ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಹೆಚ್ ಡಿ ಕೋಟೆ ತಾಲೂಕನ್ನು ಜೂನ್ 29 ರಿಂದ ಜುಲೈ 10ರವರೆಗೆ ಲಾಕ್ಡೌನ್ ಮಾಡಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದಾರೆ.
ಇದೇ ಸೋಮವಾರದ ಜೂನ್ 29 ರಿಂದ ಜುಲೈ 10ರವರೆಗೆ ಲಾಕ್ಡೌನ್ ಆಗಲಿದೆ. ಬೆಳಗ್ಗೆ 7 ರಿಂದ 2 ಗಂಟೆಯವರೆಗೆ ಮಾತ್ರ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಹಾಗೂ ಸರ್ಕಾರಿ ಕಚೇರಿಯಲ್ಲಿ 1 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಅವಕಾಶವಿದೆ. ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಇರುತ್ತದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.