ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅಧಿಕ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದಮ್ಮನಕಟ್ಟೆ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ 125 ಮಿ.ಮೀಟರ್ ದಾಖಲೆಯ ಮಳೆಯಾಗುತ್ತಿದ್ದು, ಇದರಿಂದ ಅರಣ್ಯ ಪ್ರದೇಶದಲ್ಲಿ ಎಲ್ಲಾ ಕಡೆ ನೀರು ತುಂಬಿದೆ. ಆದ್ದರಿಂದ ದಮ್ಮನಕಟ್ಟೆ ಸಫಾರಿ ಕೇಂದ್ರದಿಂದ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಂತರಸಂತೆಯ ಆರ್ಎಫ್ಓ ವಿನಯ್ ತಿಳಿಸಿದ್ದಾರೆ. ಸಾಧ್ಯವಾದಷ್ಟು ಪ್ರವಾಸಿಗರು ಇಲ್ಲಿಗೆ ಬರದಂತೆ ಮನವಿಯನ್ನೂ ಮಾಡಿದ್ದಾರೆ.
ದಾಖಲೆ ಮಳೆ:
ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ 30 ವರ್ಷಗಳಿಂದ ಈ ರೀತಿಯಲ್ಲಿ ಮಳೆಯಾಗದೆ ದಾಖಲೆ ಸೃಷ್ಟಿ ಮಾಡಿದೆ. ಇದರಿಂದ ನಾಗರಹೊಳೆ ಹಾಗೂ ಬಂಡೀಪುರ ವ್ಯಾಪ್ತಿಯ ನಗು ಹಾಗೂ ತಾರಕ ಜಲಾಶಯವೂ ಕೂಡ ತುಂಬಿದೆ.