ETV Bharat / state

ಬಾದಾಮಿ ಜನರಿಂದ ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಗಿಫ್ಟ್: ಜಮೀರ್ ಅಹಮ್ಮದ್ - MLA Tanveer Seth

ನನ್ನ ಬೆಂಬಲಿಗರಿಗೆ ನಾನು ಟಿಕೆಟ್ ಕೇಳಿದ್ದೇನೆ. ಸುಮಾರು 24 ಮಂದಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ‌. ನಾನು ಸಹ ಕಾಂಗ್ರೆಸ್​ನಲ್ಲಿ ಪ್ರಬಲ ನಾಯಕ. ನನಗೂ ಆಪ್ತರು ಟಿಕೆಟ್ ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹಮ್ಮದ್ ಅವರು ಹೇಳಿದ್ದಾರೆ.

ಶಾಸಕ ಜಮೀರ್ ಅಹಮ್ಮದ್
ಶಾಸಕ ಜಮೀರ್ ಅಹಮ್ಮದ್
author img

By

Published : Dec 18, 2022, 10:45 PM IST

ಶಾಸಕ ಜಮೀರ್ ಅಹಮ್ಮದ್ ಅವರು ಮಾತನಾಡಿದರು

ಮೈಸೂರು: ಬಾದಾಮಿ ಜನರಿಂದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಗಿಫ್ಟ್ ಸಿಗಲಿದೆ ಎಂದು ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ.

ಭಾನುವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 60 ವರ್ಷದಲ್ಲಿ ಆಗದಷ್ಟು ಅಭಿವೃದ್ಧಿ ಐದು ವರ್ಷದಲ್ಲಿ ಆಗಿದೆ. ಆದ್ದರಿಂದ ಸಿದ್ದರಾಮಯ್ಯ ನಮ್ಮ ಕ್ಷೇತ್ರದಲ್ಲೇ ಸ್ಪರ್ಧಿಸಬೇಕು ಅಂತ ಬಾದಾಮಿ ತಾಲೂಕಿನ ಜನ ಹೇಳುತ್ತಿದ್ದಾರೆ‌ ಎಂದರು.

ಶಾಸಕನಾದವನು 15 ದಿನಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಬರಬೇಕು. ನನಗೆ ಬರೋಕೆ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದಾಗಿ ಜನ ಹೆಲಿಕಾಪ್ಟರ್ ಕೊಡಿಸೋಕೆ ತೀರ್ಮಾನ ಮಾಡಿದ್ದಾರೆ. 25 ಕೋಟಿ ರೂ. ಆಗಲಿ, ಜನರೇ ದುಡ್ಡು ಹಾಕಿ ಹೆಲಿಕಾಪ್ಟರ್ ಕೊಡಿಸಬೇಕು ಅಂದುಕೊಂಡಿದ್ದಾರೆ. ಇದಕ್ಕಾಗಿ ಬಾದಾಮಿ ತಾಲೂಕಿನ ಜನ ಚಂದ ವಸೂಲಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ: ನನ್ನ ಬೆಂಬಲಿಗರಿಗೆ ನಾನು ಟಿಕೆಟ್ ಕೇಳಿದ್ದೇನೆ. ಸುಮಾರು 24 ಮಂದಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ‌. ನಾನು ಸಹ ಕಾಂಗ್ರೆಸ್​ನಲ್ಲಿ ಪ್ರಬಲ ನಾಯಕ. ನನಗೂ ಆಪ್ತರು ಟಿಕೆಟ್ ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ. ಈ ವಿಚಾರವನ್ನು ನಾನು ಸಹ ಹೈಕಮಾಂಡ್​ಗೆ ತಿಳಿಸಿದ್ದೇನೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಮಾತನಾಡಿ, 224 ಕ್ಷೇತ್ರದಿಂದಲೂ ಸಿದ್ದರಾಮಯ್ಯಗೆ ಒತ್ತಡವಿದೆ. ನಾನೂ ಸಹ ಚಾಮರಾಜಪೇಟೆಗೆ ಬನ್ನಿ ಅಂತ ಹೇಳುತ್ತಿದ್ದೇನೆ. ಅವರು ಇನ್ನೂ ಎಲ್ಲಿ ಸ್ಪರ್ಧೆ ಮಾಡಬೇಕು ಅಂತ ಸಿದ್ಧತೆ ನಡೆಸಿಲ್ಲ. ಬಾದಾಮಿಯಲ್ಲಿ ನಾನು ಸಹ ಪ್ರವಾಸ ಮಾಡಿ ಜನರ ಜತೆ ಮಾತನಾಡಿದ್ದೇನೆ. ಅಲ್ಲಿ ದಾರಿಯುದ್ದಕ್ಕೂ ಜನರು ಸಿದ್ದರಾಮಯ್ಯ ಅವರೇ ಬರಬೇಕು ಅನ್ನುತ್ತಿದ್ದಾರೆ. ನಮ್ಮ‌ ಕ್ಷೇತ್ರ ‌ನಾಲ್ಕು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಇಷ್ಟು ವರ್ಷದಲ್ಲಿ ಆಗದ ಅಭಿವೃದ್ಧಿ ನಾಲ್ಕು ವರ್ಷದಲ್ಲಿ ಆಗಿದೆ ಎಂದರು.

ಹೈಕಮಾಂಡ್ ಹೇಳಿದರೆ ನಾನು ಎನ್. ಆರ್ ಕ್ಷೇತ್ರದಲ್ಲಿ ಸ್ವರ್ಧೆ ಮಾಡಲೇಬೇಕು. ಪರೋಕ್ಷವಾಗಿ ಶಾಸಕ ತನ್ವೀರ್ ಸೇಠ್​ಗೆ ಟಾಂಗ್ ನೀಡಿದ ಜಮೀರ್ ಅಹಮ್ಮದ್, ನಾನು ಈಗ ಚಾಮರಾಜಪೇಟೆ ಶಾಸಕ. ಮುಂದಿನ ಚುನಾವಣೆಯಲ್ಲಿ ಹೈಕಮಾಂಡ್ ಇಲ್ಲಿ ಸ್ಪರ್ಧೆ ಬೇಡ ಅಂದ್ರೆ ನಾನು ಏನು ಮಾಡೋದಕ್ಕೆ ಆಗಲ್ಲ. ಒಂದು ವೇಳೆ ಮೈಸೂರಿನ ಎನ್.ಆರ್ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಅಂದರೆ ನಾನು ಸ್ಪರ್ಧೆ ಮಾಡಲೇಬೇಕು ಎಂದು ತಿಳಿಸಿದರು.

ಸಿಎಂ ಅಭ್ಯರ್ಥಿ ಅಂತ ಘೋಷಿಸಲಿ: ಹೆಚ್. ಡಿ ಕುಮಾರಸ್ವಾಮಿಯಿಂದ ಮುಸ್ಲಿಂ ಮುಖ್ಯಮಂತ್ರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಮುಸಲ್ಮಾನರನ್ನೇ ಸಿಎಂ ಮಾಡ್ತೀವಿ ಅಂತ ಘೋಷಣೆ ಮಾಡಬೇಕು. ಅವರಿಗೆ ಮುಸ್ಲಿಂರ ಮೇಲೆ ಪ್ರೀತಿ ಇದ್ದರೆ ಸಿ ಎಂ ಇಬ್ರಾಹಿಂ ಅವರನ್ನೇ ಸಿಎಂ ಅಭ್ಯರ್ಥಿ ಅಂತ ಘೋಷಿಸಲಿ ಎಂದು ಸವಾಲು ಹಾಕಿದರು.

ಜೆಡಿಎಸ್​ಗೆ 18, 20, 23 ಸ್ಥಾನ ಬರುತ್ತೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರಿಗೆ 100 ಸೀಟ್ ಬರೋದಕ್ಕೂ ಆಗಲ್ಲ. ಮುಸ್ಲಿಂ ಮತ ಸೆಳೆಯಲು ಈ ರೀತಿಯ ಹೇಳಿಕೆ‌ ನೀಡುತ್ತಿದ್ದಾರೆ ಅಷ್ಟೇ ಎಂದು ಲೇವಡಿ ಮಾಡಿದರು.

ಓದಿ: ಚಾಮರಾಜ ಕ್ಷೇತ್ರದಿಂದ ಹರೀಶ್ ಗೌಡರಿಗೆ ಟಿಕೆಟ್ ಫಿಕ್ಸ್​: ಜಮೀರ್ ಅಹಮ್ಮದ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.