ETV Bharat / state

2023; ಕ್ರಿಮಿನಲ್ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ಆದೇಶಗಳಿವು!

ಕ್ರಿಮಿನಲ್ ಪ್ರಕರಣಗಳಲ್ಲಿ ಹಲವು ಅರ್ಜಿಗಳ ಸಂಬಂಧ 2023ರಲ್ಲಿ ರಾಜ್ಯ ಹೈಕೋರ್ಟ್​ ನೀಡಿದ ಪ್ರಮುಖ ಆದೇಶಗಳ ಮಾಹಿತಿ ಇಲ್ಲಿದೆ.

high-court-important-orders-in-criminal-cases-in-2023
2023ರಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ಆದೇಶಗಳು
author img

By ETV Bharat Karnataka Team

Published : Dec 27, 2023, 11:32 AM IST

ಬೆಂಗಳೂರು : ಈ ವರ್ಷ ರಾಜ್ಯ ಹೈಕೋರ್ಟ್ ಹಲವು ಮಹತ್ವದ ತೀರ್ಪುಗಳನ್ನು ನೀಡಿದೆ. 2023ರಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಹೈಕೋರ್ಟ್ ನೀಡಿದ ಕೆಲ ಮಹತ್ವದ ಆದೇಶಗಳು ಹೀಗಿವೆ..

  • ಮೃತದೇಹಗಳ ಮೇಲೆ ಲೈಂಗಿಕ ಕ್ರಿಯೆ ನಡೆಸುವಂತಹ ಅಪರಾಧಿಗಳಿಗೆ ಶಿಕ್ಷೆ ವಿಧಿಸುವುದಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕೆಲವು ನಿಬಂಧನೆಗಳನ್ನು ತಿದ್ದುಪಡಿ ಮಾಡುವುದು ಅಥವಾ ಹೊಸ ನಿಬಂಧನೆಗಳನ್ನು ಜಾರಿ ಮಾಡುವಂತೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು.
  • ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ನಿಂದ ಜಾಮೀನು.
  • ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ದಾಖಲಾಗಿದ್ದ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು.
  • ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪಿತೂರಿ ಮಾಡಿದ ಆರೋಪದಲ್ಲಿ ಮಾಜಿ ಶಾಸಕ ಹಾಗೂ ಮಠದ ಆಡಳಿತಾಧಿಕಾರಿಯೂ ಆಗಿದ್ದ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧದ ಪ್ರಕರಣ ರದ್ದುಪಡಿಸಿ ಆದೇಶ.
  • ಸಾಮಾಜಿಕ ಜಾಲತಾಣ ಫೇಸ್​ಬುಕ್ ಖಾತೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಸಂದೇಶವುಳ್ಳ ದೃಶ್ಯ ಪೋಸ್ಟ್ ಮಾಡಿದ್ದ ರಾಯಚೂರಿನ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಿ ಆದೇಶ.
  • ಕೊಲೆ ಪ್ರಕರಣದಲ್ಲಿ 10 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ವಿವಾಹವಾಗುವುದಕ್ಕಾಗಿ 15 ದಿನ ಪೆರೋಲ್ ನೀಡಿ ಆದೇಶ.
  • ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಕಾರಣದಿಂದ ವ್ಯಕ್ತಿಯನ್ನು ಕೊಂದಿದ್ದಾರೆ ಎಂಬುದಾಗಿ ನೆರೆಹೊರೆಯವರು ನೀಡಿದ ಹೇಳಿಕೆಯನ್ನೇ ಸಾಕ್ಷ್ಯವನ್ನಾಗಿ ಪರಿಗಣಿಸಿ ಶಿಕ್ಷೆ ವಿಧಿಸಲಾಗದು ಎಂದ ಹೈಕೋರ್ಟ್​.
  • ಭಾರತ ಪ್ರವೇಶಕ್ಕೆ ಪಡೆದಿದ್ದ ವೀಸಾ ಅವಧಿ ಮುಗಿದ ಬಳಿಕವೂ ರಾಜ್ಯದಲ್ಲಿ ನೆಲೆಸಿದ್ದ ಚೀನಿ ಮಹಿಳೆಯ ವೀಸಾ ಅವಧಿ ವಿಸ್ತರಿಸಲು ಕೋರಿದ್ದ ಅರ್ಜಿ ವಜಾ.
  • ಆತ್ಮಹತ್ಯೆಗೆ ಪ್ರಚೋದನೆ ನೀಡುವ ಆರೋಪ ಸಾಬೀತಾಗಬೇಕಾದಲ್ಲಿ ಘಟನೆ ನಡೆಯುವುದಕ್ಕೂ ಮುನ್ನ ಸಮೀಪದ ದಿನಗಳಲ್ಲಿ ಪ್ರಚೋದನೆ ನೀಡಿರಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ.
  • ಪತ್ನಿಯ ಶೀಲ ಶಂಕಿಸಿ ತನ್ನ ಮೂವರು ಮಕ್ಕಳು ಸೇರಿ ಐವರನ್ನು ಕೊಂದ ವ್ಯಕ್ತಿಗೆ ಮರಣದಂಡನೆ ವಿಧಿಸಿ ಆದೇಶ.
  • ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ನಿವೃತ್ತಿ.
  • ಪೊಲೀಸ್ ಸಬ್ ಇನ್ಸ್​ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ರದ್ದುಪಡಿಸಿದ್ದ ಕ್ರಮ ಎತ್ತಿ ಹಿಡಿದು ಆದೇಶ.
  • ದುಂಡ ಗ್ರಾಮದಲ್ಲಿ ದಲಿತರ ಮೇಲಿನ ಹಲ್ಲೆ ಪ್ರಕರಣ ಸಂಬಂಧ 10 ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್​.
  • ಆರೋಪಿಯೊಬ್ಬರ ವೈಯಕ್ತಿಕ ಹಕ್ಕಿಗಿಂತಲೂ ಸಮಾಜದ ಹಿತದೃಷ್ಟಿ ಮುಖ್ಯವಾಗುತ್ತದೆ ಎಂದು ತಿಳಿಸಿದ ನ್ಯಾಯಪೀಠ, ಮಾದಕ ದ್ರವ್ಯಗಳ ಕಳ್ಳಸಾಗಣೆ ಮಾಡುತ್ತಿದ್ದ ಕೀನ್ಯಾ ದೇಶದ ಆರೋಪಿಗೆ ಜಾಮೀನು ನಿರಾಕರಣೆ.
  • ರಾಷ್ಟ್ರೀಯ ತನಿಖಾ ದಳದ ಪ್ರಕರಣಗಳ ಶೀಘ್ರ ವಿಚಾರಣೆ ನಡೆಸಲು ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಗಳ ರಚನೆಗೆ ಸರ್ಕಾರಕ್ಕೆ ಶಿಫಾರಸು.
  • ಪೊಲೀಸ್ ಸಬ್ ಇನ್ಸ್​ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ 35ನೇ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು.
  • ಆಧುನಿಕ ಯುಗದಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ಆಘಾತಕಾರಿ. ಸಾರ್ವಜನಿಕ ಸ್ಥಳದಂತಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿದ 8 ಮಂದಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಣೆ
  • ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪಗಳಿಗೆ ಪೂರಕ ಮತ್ತು ಬಲವಾದ ಸಾಕ್ಷ್ಯಾಧಾರಗಳಿರದಿದ್ದಲ್ಲಿ ಅಂತಹ ಆರೋಪ ಪರಿಗಣಿಸಲಾಗದು ಎಂದು ಆದೇಶ.
  • ಕಳೆದ ಪಾಸ್​​ಪೋರ್ಟ್ ಮತ್ತೆ ಪಡೆಯಲು ಅರ್ಜಿಯೊಂದಿಗೆ ಎಫ್‌ಐಆರ್ ಪ್ರತಿ ಕಡ್ಡಾಯ ಎಂದ ನ್ಯಾಯಾಲಯ.
  • ಪೊಲೀಸ್ ಸಬ್‌ ಇನ್ಸ್​ಪೆಕ್ಟರ್ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆ ನಡೆಸಲಸಬಹುದು ಎಂದು ಹೈಕೋರ್ಟ್ ಆದೇಶ.

ಇದನ್ನೂ ಓದಿ: ವಿಚ್ಛೇದನ, ಜೀವನಾಂಶ: ಹೈಕೋರ್ಟ್‌ ಹೊರಡಿಸಿದ ಪ್ರಮುಖ ಆದೇಶಗಳಿವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.