ಮೈಸೂರು: ಈ ಬಾರಿ ನಾಡಹಬ್ಬ ದಸರಾ ಆಚರಣೆ ಸಂಬಂಧ ಸಿಎಂ ನೇತೃತ್ವದಲ್ಲಿ ಜುಲೈ 31 ರಂದು ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಆ ಸಭೆಗೆ ಮೈಸೂರಿನ ಜಿಲ್ಲಾಡಳಿತದ ಪರವಾಗಿ ಉನ್ನತ ಮಟ್ಟದ ಅಧಿಕಾರಿಗಳು ಆಗಮಿಸುವಂತೆ ಸೂಚಿಸಲಾಗಿದೆ.
ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಅದ್ಧೂರಿಯಾಗಿ ಆಚರಿಸುವ ಸಂಬಂಧ, ಯಾವ ರೀತಿ ರೂಪುರೇಷೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಏನೆಲ್ಲ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಲು ಜುಲೈ 31 ಕ್ಕೆ, ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಹಾಗೂ ಸಂಬಂಧ ಪಟ್ಟ ಇಲಾಖೆಯ ಮುಖ್ಯಸ್ಥರು ಭಾಗವಹಿಸುವಂತೆ ಸೂಚಿಸಲಾಗಿದೆ. ಈ ಸಭೆಯಲ್ಲಿ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕೆ ಸಂಬಂಧಿಸಿದ ರೂಪುರೇಷೆಗಳನ್ನು ಚರ್ಚಿಸಲಾಗುವುದು. ಅಂದು ಗಜ ಪಯಣ, ನಾಡಹಬ್ಬ ದಸರಾದಲ್ಲಿ ಸ್ಥಬ್ಧಚಿತ್ರಗಳ ಆಯ್ಕೆ ಸೇರಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು.
ಗಜ ಪಯಣಕ್ಕೆ ಸಿದ್ದತೆ: ಈ ಬಾರಿ ನಾಡಹಬ್ಬ ದಸರಾದಲ್ಲಿ ಭಾಗವಹಿಸುವ 14 ಆನೆಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಸಂಬಂಧ ಡಿಸಿಎಫ್ ಹಾಗೂ ಇತರ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಈಗಾಗಲೇ ಆನೆ ಶಿಬಿರಗಳಿಗೆ ಭೇಟಿ ನೀಡಿ, ಅಭಿಮನ್ಯು ನೇತೃತ್ವದ ಗಜಪಡೆಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಆನೆಗಳ ಆಯ್ಕೆ ಬಗ್ಗೆ ಹಾಗೂ ಯಾವ್ಯಾವ ಆನೆಗಳು ದಸರಾದಲ್ಲಿ ಭಾಗವಹಿಸಲಿವೆ ಎಂಬ ಬಗ್ಗೆ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ, ಆನೆಗಳನ್ನು ಅಂತಿಮಗೊಳಿಸಲಾಗುವುದು. ಗಜಪಯಣ ಸೇರಿದಂತೆ ಪ್ರಮುಖ ವಿಷಯಗಳು ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ಅರಣ್ಯ ಇಲಾಖೆಯ ಡಿಸಿಎಫ್ ಸೌರವ್ ಕುಮಾರ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
ದಸರಾಗೂ ಮುನ್ನ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಮಾಡಲು ಸೂಚನೆ: ಇತ್ತೀಚೆಗೆ ಸಭೆ ಕರೆದಿದ್ದ ಹಸಿರು ನ್ಯಾಯಾಧಿಕರಣದ ಮುಖ್ಯಸ್ಥ ಹಾಗೂ ನ್ಯಾಯಮೂರ್ತಿ ಸುಭಾಷ್ ಬಿ ಅವರು ದಸರಾ ಹಬ್ಬ ಪ್ರಾರಂಭವಾಗುವುದಕ್ಕೂ ಮುನ್ನ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಸೂನಚೆ ನೀಡಿದ್ದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಗಣದಲ್ಲಿ ಕಸ ವಿಲೇವಾರಿ ಕುರಿತು ಚರ್ಚೆಗೆ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದರು. ಚಾಮುಂಡಿ ಬೆಟ್ಟ ದೇವಸ್ಥಾನ ಆಡಳಿತ ಮಂಡಳಿ ಸೇರ ಸುತ್ತಮುತ್ತ ಎಲ್ಲ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಕ್ರಮ ವಹಿಸಿ, ತಪ್ಪಿದ್ದಲ್ಲಿ ದಂಡ ವಿಧಿಸುವಂತೆ ಹೇಳಿದ್ದರು.
ಇದನ್ನೂ ಓದಿ: Mysore Dasara: ದಸರಾದಲ್ಲಿ ಪಾಲ್ಗೊಳ್ಳುವ ಹೆಣ್ಣು ಆನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಕಡ್ಡಾಯ