ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ತಡೆ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಾಗೇಂದ್ರ, ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಕರೆ ಕೊಟ್ಟಿರುವ ಹಿನ್ನೆಲೆ ರೈತರು ನಾಳಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.
ನಾಳೆ ಮಧ್ಯಾಹ್ನ 12ರಿಂದ 3 ಗಂಟೆವರೆಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ತಡೆಗೆ ಮೈಸೂರು-ಬೆಂಗಳೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಸರ್ಕಲ್, ಮೈಸೂರು-ಊಟಿ ರಸ್ತೆಯ ಬಂಡಿಪಾಳ್ಯ ಬಳಿ, ಮೈಸೂರು-ಮಾನಂದವಾಡಿ ರಸ್ತೆಯ ಜಯಪುರ ಬಳಿ, ನಂಜನಗೂಡು-ಗುಂಡ್ಲುಪೇಟೆ, ಮೈಸೂರಿನ ಎಲ್ಲಾ ತಾಲೂಕಿನಲ್ಲಿ ಪ್ರತಿಭಟನೆ ನಡೆಯಲಿದೆ.